ಚಿಕ್ಕಮಗಳೂರು: ತನಗೆ ಕಚ್ಚಿದ ಹಾವನ್ನು ಕಾರ್ಮಿಕನೋರ್ವ ಕೈಯಲ್ಲಿ ಹಿಡಿದುಕೊಂಡು ನೇರವಾಗಿ ಆಸ್ಪತ್ರೆಗೆ ಬಂದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ.
ತರೀಕೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿ, ತನ್ನ ಊರಿಗೆ ಹೋಗಲು ರೈಲ್ವೆ ನಿಲ್ದಾಣದ ಬಳಿ ಬಂದಾಗ ಹಾವು ಕಚ್ಚಿದೆ. ಕಚ್ಚಿದ ಹಾವನ್ನು ಹಿಡಿದು ನೇರವಾಗಿ ತರೀಕೆರೆ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ್ದಾನೆ.
ವ್ಯಕ್ತಿಯನ್ನು ಕೊಲ್ಕತ್ತಾ ಮೂಲದ ಆಸೀಫ್ ಎಂದು ಗುರುತಿಸಲಾಗಿದೆ. ಈತನಿಗೆ ಕಚ್ಚಿದ ಹಾವು ಕೊಳಕು ಮಂಡಲ ಹಾವಾಗಿದೆ. ಸದ್ಯ ತರೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಈತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


