nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Facebook Twitter Instagram
    ಟ್ರೆಂಡಿಂಗ್
    • ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್
    • ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ
    • ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!
    • ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ
    • ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್
    • ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!
    • ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಡಂಚಿನ ಗ್ರಾಮಕ್ಕೆ ಸಂಸದರ ನಿಧಿಯಿಂದ ಆಂಬ್ಯುಲೆನ್ಸ್ ನೀಡಿದ ವಿ.ಶ್ರೀನಿವಾಸ್‍ ಪ್ರಸಾದ್
    ಜಿಲ್ಲಾ ಸುದ್ದಿ March 25, 2022

    ಕಾಡಂಚಿನ ಗ್ರಾಮಕ್ಕೆ ಸಂಸದರ ನಿಧಿಯಿಂದ ಆಂಬ್ಯುಲೆನ್ಸ್ ನೀಡಿದ ವಿ.ಶ್ರೀನಿವಾಸ್‍ ಪ್ರಸಾದ್

    By adminMarch 25, 2022No Comments2 Mins Read
    shreenivas prasad

    ಸರಗೂರು: ಸಂಸದರ ನಿಧಿಯಿಂದ 50ಲಕ್ಷ ರೂ. ವೆಚ್ಚದಲ್ಲಿ ಅತ್ಯಾವಶ್ಯಕತೆ ಇರುವ ಆಂಬ್ಯುಲೆನ್ಸ್ ಗಳನ್ನು ನೀಡಲಾಗುತ್ತಿದ್ದು, ಕಾಡಂಚಿನ ಭಾಗದ ವಾಹನ ಸಮಸ್ಯೆಗಳನ್ನು ಗಮನಿಸಿ ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೀಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಇಲ್ಲಿನ ಎನ್.ಬೇಗೂರು ಭಾಗಕ್ಕೂ ಪ್ರತ್ಯೇಕ ಆಂಬ್ಯುಲೆನ್ಸ್  ನೀಡಲಾಗುವುದು ಎಂದು ಸಂಸದ ವಿ.ಶ್ರೀನಿವಾಸ್‍ಪ್ರಸಾದ್ ಭರವಸೆ ನೀಡಿದರು.

    ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಬುಧವಾರ ಸರಗೂರು ತಾಲ್ಲೂಕಿನ ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂಸದರ ನಿಧಿಯಿಂದ ನೀಡಲಾದ ಆಂಬ್ಯುಲೆನ್ಸ್‍ ಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಈ ಭಾಗದಲ್ಲಿ ವೈದ್ಯರು, ವಿಶೇಷವಾಗಿ ಹೆರಿಗೆ ವೈದ್ಯರು, ತಜ್ಞರುಗಳ ಕೊರತೆ ಇದೆ ಎಂಬುದರ ಬಗ್ಗೆ ಮಾಹಿತಿ ಇದೆ.  ಇದರ ಬಗ್ಗೆ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದರು.

    ನಾನು ಕಂದಾಯ ಮಂತ್ರಿಯಾಗಿದ್ದಾಗ ಸರಗೂರು ನೂತನ ತಾಲ್ಲೂಕ್ಕಾಗಿ ಮಾಡಲು ನೀಡಿದ ಸಲಹೆಯೇ ಬೇರೆ , ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನಾನು ಬಿಟ್ಟು ಹೋದಮೇಲೆ ಮಾಡಿದ ತಾಲ್ಲೂಕೇ ಬೇರೆ. ಸರಗೂರು ತಾಲ್ಲೂಕು ಆಗಬೇಕು ಅಲ್ಲಿಗೆ ಎಲ್ಲಾ ಅಧಿಕಾರಿ ವರ್ಗದವರು ಬರಬೇಕು ಎಂಬುದು ನನ್ನ ಉದ್ದೇಶವಾಗಿತ್ತು. ಆದರೆ ಓಟು ಬರಲಿ ಎಂಬ ಕಾರಣಕ್ಕೆ  ಅತ್ತ ತಾಲ್ಲೂಕೂ  ಅಲ್ಲ, ಇತ್ತ ಹೋಬಳಿಯು ಅಲ್ಲ ಎನ್ನುವಂತೆ ಸಿದ್ಧರಾಮಯ್ಯ ಮಾಡಿಬಿಟ್ಟರು ಎಂದು ಟೀಕಿಸಿದರು.

    ತಾಲ್ಲೂಕು ಕನಿಷ್ಠ ಎಂದರೂ 5 ಕೋಟಿ ರೂ. ಅನುದಾನದಿಂದಾದರೂ  ಅಭಿವೃದ್ಧಿ ಶುರುವಾಗಬೇಕಿತ್ತು.  ಆದರೆ ಇನ್ನೂ ಅಭಿವೃದ್ಧಿ ಕಂಡಿಲ್ಲ. ಇಲಾಖೆಗಳು ಸಮರ್ಪಕವಾಗಿ ಬಂದಿಲ್ಲ. ಸಿದ್ದರಾಮಯ್ಯ ಅವರು ತಪ್ಪು ಮಾಡಿದ್ದಾರೆ. ಮೊದಲು ಸರಗೂರನ್ನು ಹೋಬಳಿ ಕೇಂದ್ರವನ್ನಾಗಿ ಅಭಿವೃದ್ಧಿ ಮಾಡುವ ಚಿಂತನೆ ಮಾಡಿದ್ದೆ. ನಂತರ ನಂಜನಗೂಡು ತಾಲ್ಲೂಕಿನ ಕೆಲ ಭಾಗವನ್ನು ಗುರುತಿಸಿ, ಅದನ್ನು ಸರಗೂರು ತಾಲ್ಲೂಕಿಗೆ ಸೇರಿಸಿ ಅಭಿವೃದ್ಧಿ ಮಾಡುವ ಉದ್ದೇಶ ನನ್ನದಾಗಿತ್ತು ಎಂದರು.

    ಸರಗೂರು ಅಭಿವೃದ್ಧಿಯಾಗಬೇಕಾದರೆ ಕಬಿನಿ ಜಲಾಶಯದ ಬಳಿ ಉದ್ಯಾನವನ ಆಗಬೇಕು. ಆಗ ತಾಲ್ಲೂಕು ಹೆಚ್ಚಿನ ಅಭಿವೃದ್ಧಿ ಹೊಂದಲು ಸಾಧ್ಯ. ಇದರಲ್ಲಿ ಸಾರ್ವಜನಿಕರ ಪಾತ್ರವು ಮುಖ್ಯ. ಉದ್ಯಾವನ ನಿರ್ಮಾಣವಾದರೆ ನಂತರ ರಸ್ತೆಗಳ ಅಭಿವೃದ್ಧಿಯಾಗುತ್ತದೆ. ಇದರಿಂದ ವ್ಯಾಪಾರ ವಹಿವಾಟು ಹೆಚ್ಚಾಗಿ ತಾಲ್ಲೂಕಿನ ಜನ ಅಭಿವೃದ್ಧಿಯಾಗಿ ತಾಲ್ಲೂಕು ಸಹ ಅಭಿವೃದ್ಧಿಯಾಗುತ್ತದೆ. ಆದ್ದರಿಂದ ಉದ್ಯಾನವನ ನಿರ್ಮಿಸುವ ಬಗ್ಗೆ ಸರ್ಕಾರದೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

    ಕಾರ್ಯಕ್ರಮದಲ್ಲಿ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಅಧ್ಯಕ್ಷ ಅಪ್ಪಣ್ಣ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಚ್.ಪ್ರಸಾದ್, ತಹಸೀಲ್ದಾರ್ ಚಲುವರಾಜು, ಇ.ಒ.ರಾಜೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್, ವೈದ್ಯಾಧಿಕಾರಿ ಡಾ.ಪಾರ್ಥಸಾರಥಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ, ಉಪಾಧ್ಯಕ್ಷ ವಿನಯ್, ಬಿ.ಮಟಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪಬಾಯಿ ಮಲ್ಲೇಶ್‍ನಾಯಕ, ಉಪಾಧ್ಯಕ್ಷ ದೇವದಾಸ್, ಪಟ್ಟಣ ಪಂಚಾಯಿತಿ ಸದಸ್ಯರಾದ ಶಿವಕುಮಾರ್, ಉಮಾ, ಗ್ರಾಮ ಪಂಚಾಯಿತಿ ಸದಸ್ಯರಾದ ಕುರ್ಣೇಗಾಲ ಬೆಟ್ಟಸ್ವಾಮಿ, ಸೋಮ, ಮಲ್ಲೇಶ್‍ನಾಯಕ, ಬೊಮ್ಮ, ರಾಣಿಬಾಯಿ ನಾಗನಾಯಕ, ಬಿಜೆಪಿ ಮುಖಂಡರಾದ ಡಿ.ಜಿ.ಶಿವರಾಜು, ಸಿ.ಕೆ.ಗೀರೀಶ್, ಗುರುಸ್ವಾಮಿ, ಪರಶಿವಮೂರ್ತಿ, ರಮೇಶ್, ಮಹೇಶ್ ಮುಂತಾದವರು ಹಾಜರಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

     

    admin
    • Website

    Related Posts

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!

    September 27, 2026

    ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!

    September 26, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    ಬೆಂಗಳೂರು: ಬಿಡದಿಯಲ್ಲಿ ರೈತರು ಯಾರೂ ರಸ್ತೆ ತಡೆ ನಡೆಸಬಾರದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದು, ಟೌನ್‌ ಶಿಪ್‌ ಬೇಡವಾದವರು…

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!

    September 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.