ಮೈಸೂರು: ಕಾಡಾನೆ ದಾಳಿಗೆ ದಸರಾ ಆನೆ ಗೋಪಾಲಸ್ವಾಮಿ ಮೃತಪಟ್ಟಿದ್ದು, ಮೇಯಲು ಬಿಟ್ಟದ್ದ ವೇಳೆ ಕೊಳುವಿಗೆ ಬಳಿ ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿ ನಡೆಸಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದ ಗೋಪಾಲಸ್ವಾಮಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ.
39 ವರ್ಷದ ಗೋಪಾಲಸ್ವಾಮಿ ಆನೆ, 14 ದಸರಾ ಮಹೋತ್ಸವದಲ್ಲಿ ಭಾಗಿಯಾಗಿತ್ತು. ನೇರಳಕುಪ್ಪೆ ಬಿ ಹಾಡಿ ಕ್ಯಾಂಪಿನಲ್ಲಿದ್ದ ವೇಳೆ ಈ ಘಟನೆ ನಡೆದಿದೆ. ಪುಂಡಾಟ ನಡೆಸುತ್ತಿದ್ದ ಅಯ್ಯಪ್ಪ ಎಂಬ ಕಾಡಾನೆ ದಾಳಿಗೆ ಗೋಪಾಲಸ್ವಾಮಿ ಬಲಿಯಾಗಿದೆ.
ಅಯ್ಯಪ್ಪ ಆನೆಗೆ ಕಾಲರ್ ಅಳವಡಿಸಲಾಗಿತ್ತು. ದಾಳಿಯಲ್ಲಿ ಗೋಪಾಲಸ್ವಾಮಿ ಕಾಲು, ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿತ್ತು. ನಾಲ್ಕು ವೈದ್ಯರ ತಂಡದಿಂದ ಚಿಕಿತ್ಸೆ ಕೊಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮಧ್ಯಾಹ್ನ 1 ಗಂಟೆಯಲ್ಲಿ ಆನೆ ಸಾವನ್ನಪ್ಪಿದೆ.
ಡಿಸಿಎಫ್ ಹರ್ಷಕುಮಾರ್ ನೇತೃತ್ವದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುತ್ತಿದೆ. ಶಾಂತ ಸ್ವಾಭಾವದ ಗೋಪಾಲಸ್ವಾಮಿ ಆನೆ. ಈ ಬಾರಿಯ ದಸರಾದಲ್ಲಿ ಮರದ ಅಂಬಾರಿ ಹೊತ್ತು ಗಮನ ಸೆಳೆದಿತ್ತು. ಕಳೆದ ವರ್ಷ ಶ್ರೀರಂಗಪಟ್ಟಣದ ದಸರಾ ಮಹೋತ್ಸವ ಉದ್ಘಾಟನೆ ವೇಳೆ ಜನದಟ್ಟಣೆ, ಪಟಾಕಿ ಶಬ್ದದಿಂದ ಗೋಪಾಲಸ್ವಾಮಿ ಆನೆ ವಿಚಲಿತನಾಗಿದ್ದ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


