ಹಾಸನ: ಜಿಲ್ಲೆಯ ಬೇಲೂರಿನಲ್ಲಿ ಕಿಡಿಗೇಡಿಗಳು ಕಾಡಾನೆಯನ್ನು ಗುಂಡಿಕ್ಕಿ ಕೊಂದಿರುವ ಘಟನೆ ವರದಿಯಾಗಿದೆ. ಸಯ್ಯದ್ ಸತ್ತರ್ ಎಂಬುವವರ ತೋಟದಲ್ಲಿ ಸುಮಾರು 15 ವರ್ಷದ ಗಂಡಾನೆಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ
ಘಟನೆ ಸಂಬಂಧ ಆನೆಯ ಮರಣೋತ್ತರ ಪರೀಕ್ಷೆಗೆ ಭದ್ರ ಟೈಗರ್ನಿಂದ ವಿಶೇಷ ವೈದ್ಯರ ತಂಡ ಆಗಮಿಸುತ್ತಿದೆ. ಅರೇಹಳ್ಳಿ, ಮಲಸಾವರ ಸುತ್ತಮುತ್ತ 30 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಅಪಾರ ಪ್ರಮಾಣದ ಬೆಳೆ ನಾಶ ಮಾಡಿವೆ. ಇತ್ತೀಚಿಗೆ ಅರೇಹಳ್ಳಿ ಭಾಗದಲ್ಲಿ ಕಾಡಾನೆ ದಾಳಿಗೆ ನಾಲ್ವರು ಕಾರ್ಮಿಕರು ಬಲಿಯಾಗಿದ್ದರು.
ಗುಂಡು ಹಾರಿಸಿದ್ದರಿಂದಾಗಿ ಆನೆ ಮೃತಪಟ್ಟಿದೆ ಎಂದು ಮೇಲ್ನೋಟದಿಂದ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಳು ತನಿಖೆಯಿಂದ ತಿಳಿದು ಬರಬೇಕಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB