ಬೆಂಗಳೂರು: ರಾಜ್ಯ ಸರ್ಕಾರದಿಂದ ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ಎಸಿಬಿ ರದ್ದುಗೊಳಿಸಿ, ಅಧಿಕೃತವಾಗಿ ಆದೇಶಿಸಿತ್ತು. ಈ ಬೆನ್ನಲ್ಲೇ ಎಸಿಪಿಯಲ್ಲಿನ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸುವಂತೆ ಅಧಿಕೃತವಾಗಿ ಆದೇಶಿಸಿದೆ.
ಈ ಸಂಬಂಧ ಎಸಿಬಿಯ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದು, ಎಸಿಬಿಯ ಎಲ್ಲಾ ತನಿಖೆ, ಪ್ರಕರಣಗಳ ಕಡತಗಳನ್ನು ಸಂಪೂರ್ಣವಾಗಿ ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸುವಂತೆ ಸೂಚಿಸಿದ್ದಾರೆ. ಎಲ್ಲಾ ಕಡತಗಳನ್ನು ವರ್ಗಾಯಿಸಿ, ಸ್ವೀಕೃತಿ ಪಡೆಯುವಂತೆ ಹೇಳಿದ್ದಾರೆ.
ಇದಲ್ಲದೇ ಸೆಪ್ಟೆಂಬರ್ 12ರ ಸಂಜೆ 5 ಗಂಟೆಯೊಳಗೆ ಪಾಲನಾ ವರದಿಯನ್ನು ಸಲ್ಲಿಸುವಂತೆ ಎಸಿಬಿಯ ಆಡಳಿತ ವಿಭಾಗದ ಎಸ್ಪಿಗೆ, ಕಡತ ವರ್ಗಾವಣೆಯ ಮೇಲುಸ್ತುವಾರಿ ನೀಡಿದ್ದಾರೆ. ಜೊತೆಗೆ ರಾಜ್ಯದ ಎಲ್ಲಾ ವಲಯಗಳ ಕಡತ ಪಡೆದ ವರದಿ ಸಲ್ಲಿಸುವಂತೆಯೂ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


