ಯಾವುದೇ ಕಾರಣಕ್ಕೂ ಕಾಂಗ್ರೆಸ್‌ನವರು ಮುಖ್ಯಮಂತ್ರಿಯಾಗಲು ನಾವು ಬಿಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.ಮಂಡ್ಯಕ್ಕೆ ತೆರಳುವ ಮುನ್ನ ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ.
ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದ ರೀತಿ ನಾನೇ ಸಿಎಂ, ನಾನೇ ಸಿಎಂ ಎನ್ನುತ್ತಿದ್ದಾರೆ. ಆದರೆ ಯಾವ ಕಾರಣಕ್ಕೂ ಅವರು ಸಿಎಂ ಆಗಲು ನಾವು ಬಿಡಲ್ಲ ಎಂದರು.ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ನಡೆದಿರುವ ಹೋರಾಟಕ್ಕೆ ಪ್ರತಿಕ್ರಿಯಿಸಿದ ಅವರು, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ನಾವೇ ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಮುಂದಿನ ಬಾರಿಯೂ ಬಿಜೆಪಿಯವರೇ ಮುಖ್ಯಮಂತ್ರಿಯಾಗುತ್ತಾರೆ ಎಂದರು.ಮುಂದಿನ ಚುನಾವಣೆಯಲ್ಲಿ ೧೦೦ಕ್ಕೆ ೧೦೦ ರಷ್ಟು ಬಿಜೆಪಿ ಅಧಿಕಾರ ಹಿಡಿಯಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy