nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026
    Facebook Twitter Instagram
    ಟ್ರೆಂಡಿಂಗ್
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    • ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
    • ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    • ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
    • ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
    • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಫಲ ಕೊಡದ ಜೆಡಿಎಸ್, ‘ಕೈ’ ಹಿಡಿಯಲು ಸಜ್ಜಾಗಿದ್ದಾರಾ ಕ್ಯಾಸಿನೊ ದೊರೆ?
    ರಾಜ್ಯ ಸುದ್ದಿ September 29, 2022

    ಫಲ ಕೊಡದ ಜೆಡಿಎಸ್, ‘ಕೈ’ ಹಿಡಿಯಲು ಸಜ್ಜಾಗಿದ್ದಾರಾ ಕ್ಯಾಸಿನೊ ದೊರೆ?

    By adminSeptember 29, 2022No Comments2 Mins Read
    chithradurga

    ಚಿತ್ರದುರ್ಗ, ಸೆಪ್ಟೆಂಬರ್‌, 29: ಮುಂಬರುವ 2023ರ ವಿಧಾನಸಭಾ ಚುನಾವಣೆಗೆ ಇನ್ನು ಎಂಟು ತಿಂಗಳು ಬಾಕಿ ಉಳಿದಿದೆ. ಈಗಿನಿಂದಲೇ ಟಿಕೆಟ್ ಖಾತ್ರಿ ಪಡಿಸಿಕೊಳ್ಳಲು ಟಿಕೆಟ್ ಆಕಾಂಕ್ಷಿಗಳು ಆಯಾ ಪಕ್ಷದ ವರಿಷ್ಠರ ಬೆನ್ನು ಬಿದ್ದಿದ್ದಾರೆ. 2018ರ ಜೆಡಿಎಸ್ ಪರಾಜಿತ ಅಭ್ಯರ್ಥಿ, ಕ್ಯಾಸಿನೊ ದೊರೆ ಹಾಗೂ ನಟ ದೊಡ್ಡಣ್ಣ ಅವರ ಅಳಿಯ ವೀರೇಂದ್ರ ಪಪ್ಪಿ ಅವರು ಕಾಂಗ್ರೆಸ್ ಸೇರಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ.

    “ಭಾರತ್ ಜೋಡೋ” ಪಾದಯಾತ್ರೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಂಗಳವಾರ ಚಿತ್ರದುರ್ಗಕ್ಕೆ ಬಂದಿದ್ದರು. ಆಗ ಪಪ್ಪಿ ಅವರಿಗೆ ಟಿಕೆಟ್ ನೀಡುವಂತೆ ಅಭಿಮಾನಿಗಳು ಭಾವಚಿತ್ರ, ಫೋಟೋ ಹಿಡಿದು ಡಿ.ಕೆ.ಶಿವಕುಮಾರ್‌ ಬಳಿ ಒತ್ತಾಯಿಸಿದ್ದಾರೆ. ಈ ಬೆಳವಣಿಗೆಯನ್ನು ಗಮನಿಸಿದರೆ ವೀರೇಂದ್ರ ಪಪ್ಪಿ ಅವರು ಕಾಂಗ್ರೆಸ್ ಪಕ್ಷ ಸೇರುವುದು ಬಹುತೇಕ ಖಚಿತವಾಗಿದೆ ಎನ್ನಬಹುದು.

    2018ರಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಸುಮಾರು 49 ಸಾವಿರ ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ವಿರುದ್ಧ ಪರಾಭವಗೊಂಡಿದ್ದರು. 2023ಕ್ಕೆ ಚಿತ್ರದುರ್ಗ ಕ್ಷೇತ್ರ ಬಿಟ್ಟು, ಹೊಸ ಕನಸು ಹೊತ್ತು ಹಿರಿಯೂರು ಕಡೆ ಮುಖ ಮಾಡಿದ್ದರು. 2023ರಲ್ಲಿ ಹಿರಿಯೂರಿನಿಂದ ಜೆಡಿಎಸ್ ಅಭ್ಯರ್ಥಿಯಾಗಿ ಪಪ್ಪಿ ಅವರು ಸ್ಪರ್ಧಿಸುವಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜೆಡಿಎಸ್ ಸಭೆಯಲ್ಲಿ ಪರೋಕ್ಷವಾಗಿ ಪಕ್ಷ ಸಂಘಟನೆ ಮಾಡಲು ತಿಳಿಸಿದ್ದರು.

    ಜೆಡಿಎಸ್‌ ವರಿಷ್ಠರ ಮಾತಿನಂತೆ ಪಪ್ಪಿ ಅವರು ಹಿರಿಯೂರಿನ ಶ್ರೀ ತೇರು ಮಲ್ಲೇಶ್ವರ ಹಾಗೂ ಶ್ರೀ ಕಣಿವೆ ಮಾರಮ್ಮನ ದೇವರಿಗೆ ಪೂಜೆ ಸಲ್ಲಿಸಿ ಶಕ್ತಿ ಪ್ರದರ್ಶನಕ್ಕೆ ಮುಂದಾದರು. ಉದ್ಯಮಿ ವೀರೇಂದ್ರ ಅವರು ಸ್ಪರ್ಧೆ ಮಾಡುವುದು ಬಹುತೇಕ ಖಚಿತ ಎಂದು ಕ್ಷೇತ್ರದಲ್ಲಿ ಸುದ್ದಿಯೂ ಹರಿದಾಡಿತ್ತು. ಈ ಸುದ್ದಿ ಹರಡುತ್ತಿದ್ದಂತೆ ಸ್ಥಳೀಯ ಕೆಲವು ಮುಖಂಡರು ನಮಗೆ ಟಿಕೆಟ್ ನೀಡಬೇಕು. ಯಾವುದೇ ಕಾರಣಕ್ಕೂ ಹೊರಗಿನವರಿಗೆ ಟಿಕೆಟ್ ಕೊಡಬಾರದು ಎಂದು ವಿರೋಧ ವ್ಯಕ್ತಪಡಿಸಿದ್ದರು.

    ಇನ್ನು ಚುನಾವಣೆ ಸ್ಪರ್ಧೆಗೆ ಆರಂಭದಲ್ಲೇ ಅಡ್ಡಗಾಲು ಬಂದ ಹಿನ್ನೆಲೆಯಲ್ಲಿ ಮತ್ತೆ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಾರ್ಯಕರ್ತರು, ಅಭಿಮಾನಿಗಳು ಪಟ್ಟು ಹಿಡಿದರು. ಇದರ ಬೆನ್ನಲ್ಲೇ ಪಪ್ಪಿ ಅವರಿಗೆ ಜೆಡಿಎಸ್ ಎಂಎಲ್‌ಸಿ ಸ್ಥಾನ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಕೊನೆ ಕ್ಷಣದಲ್ಲಿ ಜೆಡಿಎಸ್ ಮುಖಂಡ ಶರವಣ ಅವರನ್ನು ಎಂಎಲ್‌ಸಿ ಮಾಡಲಾಯಿತು.

    ಇತ್ತ ಹಿರಿಯೂರಿನಲ್ಲಿ ಟಿಕೆಟ್ ಸಿಗುತ್ತದೆ ಎಂದು ಅಂದುಕೊಂಡಿದ್ದ ಪಪ್ಪಿಗೆ ಎಂಎಲ್‌ಸಿ ಸ್ಥಾನವೂ ಸಿಗಲಿಲ್ಲ. ಜೆಡಿಎಸ್ ಪಕ್ಷದಲ್ಲಿ ಸರಿಯಾದ ಮನ್ನಣೆ ಸಿಗಲಿಲ್ಲ ಎಂದು ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆ. ಈಗಾಗಲೇ ಸಾರ್ವಜನಿಕ ವಲಯದಲ್ಲಿ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ಜೋರಾಗಿ ಕೇಳಿಬರುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಅಭಿಮಾನಿಗಳು ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ಟಿಕೆಟ್ ನೀಡುವಂತೆ ಮನವಿ ಮಾಡಿರುವುದು ಗಮನಾರ್ಹವಾಗಿದೆ.

    ಚಿತ್ರದುರ್ಗದ ಬಿಜೆಪಿ ಶಾಸಕ ಬಲಿಷ್ಠ ಜಿ.ಹೆಚ್. ತಿಪ್ಪಾರೆಡ್ಡಿ ಅವರನ್ನು ಸೋಲಿಸಲು ಎದುರಾಳಿ ಕಾಂಗ್ರೆಸ್ ಪಕ್ಷದಲ್ಲಿ ಯಾರು ಇಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಈಗಾಗಲೇ ಒಂದು ಬಾರಿ ಎಂಎಲ್‌ಸಿ ಹಾಗೂ 5 ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಅವರನ್ನು ಸೋಲಿಸಲು ಸುಲಭದ ಮಾತಲ್ಲ. ಲಿಂಗಾಯತ ಸಮುದಾಯಕ್ಕೆ ಸೇರಿರುವ ಉದ್ಯಮಿ ವೀರೇಂದ್ರ ಪಪ್ಪಿ ಅವರು ಚಿತ್ರದುರ್ಗ ಕ್ಷೇತ್ರದಲ್ಲಿ ತನ್ನದೇ ಆದ ವರ್ಚಸ್ಸನ್ನು ಹೊಂದಿದ್ದಾರೆ.”ಭಾರತ್ ಜೋಡೋ” ಪಾದಯಾತ್ರೆ ಮುಗಿದ ಬಳಿಕ ವೀರೇಂದ್ರ ಅವರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಅವರು ಕಾಂಗ್ರೆಸ್ ಸೇರಿದರೆ ಮುಂದಿನ ಅವರ ನಡೆ ಹೇಗಿರುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ. ಮತ್ತೊಂದೆಡೆ ನನಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂದುಕೊಂಡು ಕ್ಷೇತ್ರದಲ್ಲಿ ಓಡಾಡುತ್ತಿರುವ ಮಾಜಿ ಎಂಎಲ್‌ಸಿ ರಘು ಆಚಾರ್ ನಡೆ ಹೇಗಿರುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್

    September 22, 2026

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    Comments are closed.

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಔರಾದ್‌/ಬೀದರ್ : ಗ್ರಾಮೀಣ ಪ್ರದೇಶಗಳಲ್ಲಿ ವಿಬಿ–ಜಿ ರಾಮ್‌ ಜಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಎನ್‌ ಎಂಎಂಎಸ್‌ (NMMS)…

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.