ಕಾಂಗ್ರೆಸ್ ಪಕ್ಷದಲ್ಲಿ ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರಾಧನೆ ನಡೆಯುತ್ತಿದ್ದರೆ ಮೂಲ ಕಾಂಗ್ರೆಸ್ಸಿಗರು ಮೂಕ ಪ್ರೇಕ್ಷಕರಾಗಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್‌ನಲ್ಲಿ ಅಸಹನೆ, ಅಸಹಿಷ್ಣುತೆಯ ಅಲೆ ಪ್ರಬಲವಾಗಿ ಬೀಸುತ್ತಿದೆ. ಇಂದು ವಾಗ್ದಾಳಿ ನಡೆಸುತ್ತಿದೆ. ಮುಖ್ಯಮಂತ್ರಿ ಸ್ಥಾನದ ಕನಸು ಕಾಣುತ್ತಿರುವ ಮಲ್ಲಿಕಾರ್ಜುನ ಖರ್ಗೆಯವರು ಮತ್ತೊರ್ವರ ಸಿಎಂ ಕುರ್ಚಿಯ ಆಕಾಂಕ್ಷಿಯಾಗಿರುವ ಸಿದ್ದರಾಮಯ್ಯ ಅವರ “ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಸಾಧನೆ” ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ ಎಂದು ಬಿಜೆಪಿ ಕೆಣಕಿದೆ.
ಮೂಲ ಕಾಂಗ್ರೆಸ್ಸಿಗರಿಗೆ ಈಗ ಸಿದ್ದರಾಮಯ್ಯರವರ ಚಾಕರಿ ಮಾಡುವ ಸುಯೋಗ ಬಂದಿದೆ ಎಂದು ವ್ಯಂಗ್ಯವಾಡಿರುವ ಬಿಜೆಪಿ. ಸಿದ್ದರಾಮಯ್ಯ ಅವರ ಬಗ್ಗೆ ಇರುವ ಬೇಸರವನ್ನು ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಹರಿಪ್ರಸಾದ್ ಈ ರೀತಿ ಹೊರಹಾಕಿದ್ದಾರೆ. ಅಧಿಕಾರದಾಹಿ ಸಿದ್ದರಾಮಯ್ಯ ವಿರುದ್ಧ ಸಹನೆಯ ಕಟ್ಟೆ ಒಡೆದಿದೆ. ಎಷ್ಟೇ ಆದರೂ ಹರಿಪ್ರಸಾದ್ ಮೂಲ ಕಾಂಗ್ರೆಸ್ಸಿಗ, ವಲಸೆ ಸಿದ್ದರಾಮಯ್ಯ ಅವರನ್ನು ಎಷ್ಟು ವರ್ಷಗಳ ಕಾಲ ಸಹಿಸಿಕೊಳ್ಳಲು ಸಾಧ್ಯ ಎಂದು ಪ್ರಶ್ನಿಸಿದೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


