ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿಯನ್ನು ಖೈರವಾಡ ಗ್ರಾಮದಲ್ಲಿ ಪ್ರತಿಷ್ಠಾಪನೆ ಮಾಡಲು ಮೆರವಣಿಗೆ ಮೂಲಕ ಮಹಾರಾಜರ ಮೂರ್ತಿ ಖಾನಾಪುರ ಪಟ್ಟಣಕ್ಕೆ ಆಗಮಿಸಿತು.
ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯ ಭವ್ಯವಾಗಿ ಸ್ವಾಗತ ಮಾಡಿದರು. ಡಾಕ್ಟರ್ ಆಂಜನೇಯ ನಿಂಬಾಳ್ಕರ್ ಖೈರ್ವಾಡ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕೆಂಬ ಹಲವಾರು ವರ್ಷಗಳಿಂದ ಗ್ರಾಮಸ್ಥರ ಬೇಡಿಕೆಯಾಗಿತ್ತು.
ಆಗಿನ ಶಾಸಕಿ ಆಗಿದ್ದ ಅಂಜಲಿ ನಿಂಬಾಳ್ಕರ್ ಗ್ರಾಮಸ್ಥರಿಗೆ ಭರವಸೆ ನೀಡಿದ್ದರೂ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಗ ಈಡೇರಿಲಿದೆ. ಇದರಿಂದಾಗಿ ಗ್ರಾಮದ ಮುಖಂಡರುಗಳು ಸಂತೋಷ ವ್ಯಕ್ತಪಡಿಸಿದ್ದಾರೆ.
ಖಾನಾಪುರ ಪಟ್ಟಣದ ಮುಖ್ಯ ರಸ್ತೆಗಳಿಂದ ಶಿವಾಜಿ ಮಹಾರಾಜರ ಮೂರ್ತಿಯನ್ನು ವಾದ್ಯಗಳ ಜಾನಪದ ಯುವಕರ ನೃತ್ಯಗಳ ಘೋಷಣೆಗಳು ಜೊತೆಗೆ ಮೆರವಣಿಗೆ ಮೂಲಕ ಗ್ರಾಮಕ್ಕೆ ಕರೆದುಕೊಂಡು ಹೋದರು. ಈ ಸಂದರ್ಭದಲ್ಲಿ ಕಾಂಗ್ರೆಸ್ಸಿನ ಮುಖಂಡರುಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


