nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    • RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ
    ಜಿಲ್ಲಾ ಸುದ್ದಿ March 4, 2026

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    By adminMarch 4, 2026No Comments2 Mins Read
    kaivara tatataiah

    ಶಿವಮೊಗ್ಗ:  ಮಾನವರೆಲ್ಲರೂ ಒಂದೇ. ಮನುಕುಲದ ಉದ್ದಾರವೇ ಶ್ರೇಷ್ಟ ಎಂದು ಕೈವಾರ ತಾತಯ್ಯನವರು ನಂಬಿದ್ದು, ಮನುಕುಲದ ಉದ್ದಾರದ ಕುರಿತು ಸಾಕಷ್ಟು ಕೀರ್ತನೆಗಳನ್ನು ರಚಿಸಿ ನಮ್ಮೆಲ್ಲರಿಗೂ ಮಾರ್ಗದರ್ಶಕರಾಗಿದ್ದಾರೆ ಎಂದು ಶಾಸಕರಾದ ಎಸ್.ಎನ್. ಚನ್ನಬಸಪ್ಪ ಸ್ಮರಿಸಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಬಲಿಜ ಸೇವಾ ಸಂಘ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಕುವೆಂಪು ರಂಗ ಮಂದಿರದಲ್ಲಿ ಏರ್ಪಡಿಸಲಾಗಿದ್ದ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


    Provided by
    Provided by

    ತಾತಯ್ಯನವರು ದೇವರ ವಿಶೇಷ ಸೃಷ್ಟಿ. ಅವರು ಭಗವಂತನ ಸ್ವರೂಪ. ಪ್ರತಿಯೊಬ್ಬ ಮನುಷ್ಯ ಸಂಸ್ಕೃತಿಯನ್ನು ಅರಿತಿರಬೇಕು. ಗ್ರಾಮದ ಲೆಕ್ಕಿಗ ಭ್ರಷ್ಟನಾಗಿರಬಾರದು ಎಂದು ಅಂದೇ ಹೇಳಿದ್ದರು. ಬದುಕು ಹೇಗಿರಬೇಕು ಎಂದು ತಿಳಿಸಿಕೊಟ್ಟ ಸಾಂಸ್ಕೃತಿಕ ಹರಿಕಾರರಾದ ಇವರು ಜಾತಿ ವ್ಯವಸ್ಥೆಯನ್ನು ತೀವ್ರವಾಗಿ ವಿರೋಧಿಸುತ್ತಿದ್ದರು. ಮನುಕುಲದ ಉದ್ದಾರವೇ ಶ್ರೇಷ್ಟವೆಂದು ನಂಬಿದ್ದರು. ಸರಳ ಕನ್ನಡದಲ್ಲಿ ತತ್ವಪದಗಳು ಮತ್ತು ಕಾಲಜ್ಞಾನ ವನ್ನು ರಚಿಸಿ, ಭವಿಷ್ಯದ ಘಟನೆಗಳನ್ನು ಮುನ್ನರಿತಿದ್ದರು. ಇವರ ಕೀರ್ತನೆಗಳು ಭಕ್ತಿ, ಯೋಗ ಮತ್ತು ವೇದಾಂತದ ಸಾರವನ್ನು ಒಳಗೊಂಡಿವೆ ಎಂದರು.

    ಮನುಕುಲದ ಏಳಿಗೆಗೋಸ್ಕರ ಚಿಂತಿಸಿದ ಇಂತಹ ಮಹಾನ್ ದಾರ್ಶನಿಕರನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸುವ ಕೆಲಸ ಆಗಬಾರದು. ಇಡೀ ಸಮಾಜಕ್ಕೆ ಇವರು ಸೇರಿದವರು. ಇವರು ಹಾಕಿಕೊಟ್ಟ ದಾರಿಯಲ್ಲಿ ನಾವು ಸಾಗಬೇಕು. ಬಲಿಜ ಸಮಾಜ ಸ್ವಾವಲಂಬಿ ಸಮಾಜವಾಗಿದ್ದು, ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಎಂದು ತಿಳಿಸಿದರು.

    ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ ಎಸ್ ಚಂದ್ರಭೂಪಾಲ ಮಾತನಾಡಿ, ಇಡೀ ಸಮಾಜಕ್ಕೆ ಹಾಗೂ ಮುಂದಿನ ಪೀಳಿಗೆಗೆ ಇಂತಹ ಮಹಾನ್ ಸಾಧಕರ ಸಂದೇಶಗಳು, ತತ್ವ, ಆದರ್ಶಗಳನ್ನು ತಲುಪಿಸಬೇಕೆಂಬ ಉದ್ದೇಶದಿಂದ ಸರ್ಕಾರವು ಜಯಂತಿಗಳನ್ನು ಆಚರಿಸುತ್ತಿದೆ. ಕೈವಾರ ತಾತಯ್ಯನವರು ಎಲ್ಲ ಹೆಣ್ಣುಮಕ್ಕಳನ್ನು ತಾಯಿ ಸಮಾನ ಕಾಣುತ್ತಿದ್ದು, ಬಳೆ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಾ, ಸಮಾಜದಲ್ಲಿ ಸಾಮರಸ್ಯ ಮತ್ತು ಸಮಾನತೆ ಸಾರುವ ಕೆಲಸ ಮಾಡುತ್ತಾರೆ. ಕೀರ್ತನೆಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಪ್ರಯತ್ನ ಮಾಡುತ್ತಾರೆ. ತಾತಯ್ಯನಂತಹ ಮಹಾನ್ ವ್ಯಕ್ತಿಗಳನ್ನು ನಾವು ಸದಾ ಅನುಸರಿಸಬೇಕು ಎಂದ ಅವರು ಬಲಿಜ ಸಮಾಜವು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಬೆಳೆಯಬೇಕು ಎಂದರು.

    ಸಹ್ಯಾದ್ರಿ ವಿಜ್ಞಾನ ಕಾಲೇಜು ಪ್ರಾಧ್ಯಾಪಕರಾದ ಡಾ. ಛಾಯಾಕುಮಾರಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಸಮಾಜ ಸುಧಾರಕರಾದ ತಾತಯ್ಯನವರು ದೈವೀ ಪವಾಡದಿಂದ ಮುದ್ದಮ್ಮ ಮತ್ತು ಕೊಂಡಪ್ಪ ದಂಪತಿಗೆ ಜನಿಸುತ್ತಾರೆ. ಇವರನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಅವರೊಂದು ಅಗಾಧವಾದ ಸಮುದ್ರ.

    ಪ್ರೌಢ ವಯಸ್ಕರಾದಾಗ ಸೋದರತ್ತೆಯ ಮಗಳು ಮುನಿಯಮ್ಮ (ಲಕ್ಷ್ಮಮ್ಮ) ಳೊಂದಿಗೆ ವಿವಾಹವಾಗಿ ಮೂವರು ಮಕ್ಕಳ ತಂದೆಯಾದರು. ಜೀವನ ನಿರ್ವಹಣೆಗಾಗಿ ಬಳೆ ಮಾರುವ ವೃತ್ತಿ ಕೈಗೊಂಡರು. ಹಣದ ಬೆನ್ನತ್ತದೆ, ಶುದ್ಧ ಭಾವದಿಂದ ಬಳೆ ಮಾರುತ್ತಿದ್ದ ಇವರಿಗೂ ಪತ್ನಿಗೂ ವಿರಸ ಉಂಟಾಗುತ್ತದೆ.

    ಒಮ್ಮೆ ಬಳೆ ಮಾರಲು ಹೋದಾಗ ಎದುರಾದ ಪರದೇಶಿ ಸ್ವಾಮಿಗಳಿಂದ ಓಂ ನಮೋ ನಾರಾಯಣಾಯ ಎಂಬ ಮಂತ್ರೋಪದೇಶ ಪಡೆಯುತ್ತಾರೆ. ನಂತರ ಬೆಣಚುಕಲ್ಲೊಂದನ್ನು ಬಾಯಲ್ಲಿಟ್ಟುಕೊಂಡು ಕೈವಾರದ ನರಸಿಂಹ ಗುಹೆಯಲ್ಲಿ ಮೂರು ವರ್ಷ ಕಠಿಣ ತಪಸ್ಸು ಮಾಡಿ ದೈವ ಸಾಕ್ಷಾತ್ಕಾರ ಪಡೆಯುತ್ತಾರೆ. ಆಗ ಬಾಯಲ್ಲಿದ್ದ ಕಲ್ಲು ಸಕ್ಕರೆಯಾಗಿ ಬದಲಾಗುತ್ತದೆ. ನಂತರ ಯೋಗಿ ನಾರೇಯಣ ಎಂದು ಪ್ರಸಿದ್ದರಾದ ಅವರು ಮುಂದೆ ಪವಾಡ ಪುರುಷರಾಗುತ್ತಾರೆ. ಮನುಷ್ಯನ ಅಹಂ ಎಂಬ ಅಂಧಕಾರ ಸಕ್ಕರೆಯಂತೆ ಕರಗಬೇಕು. ಜ್ಞಾನ ಜ್ಯೋತಿ ಬೆಳಗಬೇಕು ಎಂದು ಪ್ರತಿಪಾದಿಸಿದ ಅವರು ಜ್ಞಾನ, ದಯೆ, ಸಹಬಾಳ್ವೆ, ಸಂಸ್ಕಾರ ಕೊಡುವಂತಹದ್ದೇ ನಿಜವಾದ ಶಿಕ್ಷಣ ಎಂದು ಹೇಳಿದ್ದರು ಎಂದು ತಿಳಿಸಿದರು.  ಕಾರ್ಯಕ್ರಮದಲ್ಲಿ ವಿಶೇಷ ಸಾಧನೆ ಮಾಡಿದ ಸಮಾಜದ ವಿದ್ಯಾರ್ಥಿಗಳನ್ನು ಇದೇ ವೇಳೆ ಸನ್ಮಾನಿಸಿ ಅಭಿನಂದಿಸಲಾಯಿತು.

    ಕಾರ್ಯಕ್ರಮದಲ್ಲಿ ಜಿಲ್ಲಾ ಬಲಿಜ ಸಂಘದ ಅಧ್ಯಕ್ಷರಾದ ಎಸ್.ಎನ್.ವೆಂಕಟೇಶ್, ಕಾರ್ಯದರ್ಶಿಗಳಾದ ಡಾ.ಬಿ.ಆರ್.ಶಿವಕುಮಾರ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್ ಸಮಾಜದ ಮುಖಂಡರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ

    March 9, 2026

    ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!

    March 9, 2026

    ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು

    March 8, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಚಿಕ್ಕನಾಯಕನಹಳ್ಳಿ: ತನ್ನ ಕುಟುಂಬದ ಪ್ರತಿಯೊಬ್ಬ ಸದಸ್ಯರ ಏಳಿಗೆಗಾಗಿ ಶ್ರಮಿಸಿ, ಅವರನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವುದೇ ಒಬ್ಬ ಮಹಿಳೆಯ ಜೀವನದ ದೊಡ್ಡ…

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.