ಬಾಗಲಕೋಟೆ: ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ನೂತನ ಪ್ರಚಾರ್ಯರಾಗಿ ಪ್ರೊ. ಎಸ್.ಆರ್ ಮುಗನೂರಮಠ ಅಧಿಕಾರ ಸ್ವೀಕರಿಸಿದರು.
ಪ್ರಚಾರ್ಯರಾಗಿ ಕಾರ್ಯ ನಿರ್ವಹಿಸುತಿದ್ದ ಡಾ. ವ್ಹಿ.ಎಸ್ ಕಟಗಿಹಳ್ಳಿಮಠ ಅವರು ನಿವೃತ್ತರಾದ ಹಿನ್ನೆಲೆ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಎಸ್.ಆರ್ ಮುಗನೂರಮಠ ನೂತನ ಪ್ರಾಚಾರ್ಯರಾಗಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಅವರು ಉತ್ತರ ಕರ್ನಾಟಕದ ಪ್ರತಿಷ್ಠಿತ ಕಾಲೇಜುಗಳಲ್ಲಿ ಬಸವೇಶ್ವರ ಕಲಾ ಮಹಾವಿದ್ಯಾಲಯವು ಒಂದಾಗಿದ್ದು ಮಹಾವಿದ್ಯಾಲಯದ ಶ್ರೇಯೋಭಿವೃದ್ಧಿಗಾಗಿ ನಾವೆಲ್ಲರು ಒಗ್ಗಟ್ಟಾಗಿ ಶ್ರಮಿಸೋಣ ಎಂದರು.
ನೂತನವಾಗಿ ಅಧಿಕಾರ ಸ್ವೀಕರಿಸಿ ಪ್ರಾಚರ್ಯರಿಗೆ ಹೂಗುಚ್ಚ ಕೊಡುವುದರ ಮೂಲಕ ಸತ್ಕರಿಸಲಾಯಿತು. ಈ ವೇಳೆ ವಿವಿಧ ಕಾಲೇಜುಗಳ ಪ್ರಚಾರ್ಯರು, ಭೋದಕ ಬೋದಕೇತರ ಸಿಬ್ಬಂದಿಗಳು ಪಾಲ್ಗೊಂಡು ಅಭಿನಂದಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


