ಕಲಬುರಗಿ: ಜಿಲ್ಲೆಯ ನಂದಿಕೂರ್ ಗ್ರಾಮದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.
ಕಲಬುರಗಿಯ ಬ್ರಹ್ಮಪುರ ಬಡಾವಣೆಯ ನಿವಾಸಿಯಾದ ಜ್ಯೋತಿ, ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರ ಎಂಬುವವರ ಮನೆಯ ಮುಂದೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಘಟನೆಯಿಂದ ಆತಂಕಗೊಂಡ ಮಲ್ಲಿನಾಥ್ ಕುಟುಂಬಸ್ಥರು ಸದ್ಯ ಮನೆಗೆ ಬೀಗ ಹಾಕಿ ಸ್ಥಳಾಂತರಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಫರಹತಾಬಾದ್ ಪೊಲೀಸರು ಮಲ್ಲಿನಾಥ್ ಬಿರಾದಾರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಆದರೆ, ಮೃತಳ ಪತಿ ಚಿದಾನಂದ ಅವರು ಇದು ಆತ್ಮಹತ್ಯೆಯಲ್ಲ, ಕೊಲೆ ಇರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ. ಸಾವಿನ ಹಿಂದಿನ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಘಟನೆಯು ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


