ಕಲಬುರಗಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದ ಪರಿಣಾಮ ಹಳ್ಳಗಳು ತುಂಬಿ ಹರಿಯುತ್ತಿವೆ. ಹಲವಡೆ ಮನೆಗಳ ಗೋಡೆ ಕುಸಿದಿದ್ದು, ಜಾನುವಾರುಗಳು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆಗಳು ಸಂಭವಿಸಿವೆ.
ಕಮಲಾಪುರ ತಾಲೂಕಿನ ಕುದಮೂಡ ಗ್ರಾಮದ ಸೇತುವೆ ಮೇಲೆ ಹಳ್ಳದ ನೀರಿನ ರಭಸಕ್ಕೆ ಸಿಲುಕಿ ಜಾನುವಾರುಗಳು ಕೊಚ್ಚಿಕೊಂಡು ಹೋಗಿವೆ.
ಎಡಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಗೆ ಚಿತ್ತಾಪುರ ತಾಲೂಕಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ತಾಲೂಕಿನ ದಂಡೋತಿ ಗ್ರಾಮದಲ್ಲಿ ಎರಡು ಮನೆಗಳ ಗೋಡೆ ಕುಸಿದು ಬಿದ್ದು, ಅಪಾರ ಹಾನಿ ಉಂಟಾಗಿದೆ. ರಸೂಲ್ ಸಾಬ್ ಡೋಂಗಾ ಅವರಿಗೆ ಸೇರಿದ ಮನೆಯ ಮೂರು ಕೋಣೆಯ ಗೋಡೆ ಹಾಗೂ ಪುಥಲಿ ಬೇಗಂ ಡೋಂಗಾ ಎಂಬವರಿಗೆ ಸೇರಿದ ಮನೆಯ ಗೋಡೆ ಕುಸಿದು ಬಿದ್ದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


