ತುಮಕೂರು: ಬೆಲೆ ಏರಿಕೆ ಕಾಲಕ್ಕೆ ಅನುಗುಣವಾಗಿ ಏರಿಕೆಯಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಭಿಪ್ರಾಯಪಟ್ಟಿದ್ದು, ಎಲ್ಲಾ ಸರ್ಕಾರಗಳ ಅವಧಿಯಲ್ಲಿ ಇದು ನಡೆದಿದೆ ಎಂದು ಸಮರ್ಥಿಸಿಕೊಂಡರು.
ಬೆಲೆ ಏರಿಕೆಯು ವಿಧಾನ ಪರಿಷತ್ ಚುನಾವಣೆ ಮೇಲೆ ಪರಿಣಾಮ ಬೀರಬಹುದೇ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಲೆ ಏರಿಕೆ ಸಹಜ, ಕಾಲಕ್ಕೆ ಅನುಗುಣವಾಗಿ ಬೆಲೆ ಏರಿಕೆಯಾಗುತ್ತ ಇರುತ್ತದೆ ಎಂದು ಉತ್ತರಿಸಿದರು.
ನೋಟಿನ ಮೌಲ್ಯ ಕಡಿಮೆಯಾದಂತೆ ಉತ್ಪನ್ನಗಳ ಬೆಲೆ ಹೆಚ್ಚಳವಾಗುತ್ತದೆ. ಇದು ಎಲ್ಲಾ ಸರ್ಕಾರಗಳು ಇದ್ದಾಗಲೂ ಆಗುತ್ತದೆ. ನಿರಂತರವಾಗಿ ಬೆಲೆ ಏರಿಕೆ ಆಗುತ್ತಲೇ ಬಂದಿದೆ ಎಂದು ಮಾಧುಸ್ವಾಮಿ ಸಮರ್ಥಿಸಿಕೊಂಡರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700