nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ

    June 23, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
    • ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
    • ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
    • ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
    • ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
    • ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!
    • ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
    • ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಳಸಾ ಬಂಡೂರಿ ಯೋಜನೆಗೆ ಕೇಂದ್ರದ ಒಪ್ಪಿಗೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
    ರಾಜ್ಯ ಸುದ್ದಿ December 29, 2022

    ಕಳಸಾ ಬಂಡೂರಿ ಯೋಜನೆಗೆ ಕೇಂದ್ರದ ಒಪ್ಪಿಗೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

    By adminDecember 29, 2022No Comments3 Mins Read
    bommai

    Provided by
    Provided by

    ಬೆಳಗಾವಿ : ಕಳಸಾ ಬಂಡೂರಿ ಯೋಜನೆಗೆ ಅಂತಿಮವಾಗಿ ವಿಸ್ತೃತ ಯೋಜನಾ ವರದಿಗೆ ಒಪ್ಪಿಗೆ ದೊರೆತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಬೆಳಗಾವಿಯ ಸುವರ್ಣಸೌಧದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, 1988ರಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರು ಅಂದಿನ ಮುಖ್ಯಮಂತ್ರಿ ರಾಣೆ ಯವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ನಂತರ ಗೋವಾದಲ್ಲಿ ಬಂದ ಸರ್ಕಾರಗಳು ಇದನ್ನು ಕಾರ್ಯಗತಗೊಳಿಸದೆ ವಿರೋಧಿಸಿದ್ದರು.  ಒಟ್ಟಾರೆ ಮಹದಾಯಿ ಯೋಜನೆಗೆ ಮೊದಲು ಚಿಂತನೆ ಮಾಡಿದ್ದು ಬದಾಮಿ ಶಾಸಕ ಬೆಟಗೇರಿ ಹಾಗೂ ಆರ್.ಟಿ. ದೇಸಾಯಿಯವರು. ಬೆಟಗೇರಿ ಯವರು ಬದಾಮಿಯಿಂದ ಪಾದಯಾತ್ರೆ ಮಾಡಿದ್ದರು. ನಂತರ ಕರ್ನಾಟಕಕ್ಕೆ ನೀರು ಮತ್ತು ಅವರಿಗೆ ವಿದ್ಯುತ್ ನೀಡುವುದು ಎಂದಾಗಿತ್ತು. ಇದು ಮೂಲ ಕೆಪಿಸಿ ಆರಂಭಿಸಿದ ಯೋಜನೆ. ನಂತರ ನಮಗೆ ನೀರಿನ ಕೊರತೆಯಾಗುತ್ತಿತ್ತು ಎಂದರು.

    ಮಲಪ್ರಭಾ ನದಿ ಕಾಕಂಬಿಯಲ್ಲಿ ಹುಟ್ಟಿ, ಮಹದಾಯಿ ನದಿಗೆ ತಿರುವು ನೀಡಬೇಕೆಂದು ನಿರ್ಧಾರವಾಗಿತ್ತು. ಮುಂದೆ ವಿರೋಧ ಎದುರಾದಾಗ ನಂತರ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯಾಗಿತ್ತು. ಹೆಚ್.ಕೆ.ಪಾಟೀಲ‌ ಅವರು ಆಗ ನೀರಾವರಿ ಸಚಿವರಾಗಿದ್ದರು. ಅದಕ್ಕೂ ಗೋವಾ ವಿರೋಧಿಸಿತು. ಅಂತರರಾಜ್ಯ ಜಲ ವಿವಾದವಾಯಿತು. ಹಲವಾರು ಪ್ರಯತ್ನಗಳಾದರೂ ಏನೂ ಆಗಲಿಲ್ಲ. ಮಲಪ್ರಭಾ ಅಚ್ಚುಕಟ್ಟು ಪ್ರದೇಶ ರೈತರ ಸಮಿತಿ ಸ್ಥಾಪಿಸಿ 253 ಕಿಮೀ ಪಾದಯಾತ್ರೆಯನ್ನೂ ಮಾಡಲಾಯಿತು. ಆದರೂ ಆಗಲಿಲ್ಲ. 2009 ರಲ್ಲಿ ಗೋವಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಯವರು ತಮ್ಮ ಪಕ್ಷದ ನಿಲುವನ್ನು ಸ್ಪಷ್ಟವಾಗಿ ತಿಳಿಸಿದ್ದರು. ಒಂದು ಹನಿ ನೀರನ್ನೂ ತಿರುಗಿಸಲು ಬಿಡುವುದಿಲ್ಲ ಎಂದಿದ್ದರು. ಪತ್ರಿಕೆಯಲ್ಲಿಯೂ ವರದಿಯಾಗಿತ್ತು. ಅರಣ್ಯೇತರ ಪ್ರದೇಶದಲ್ಲಿ ಕೆಲಸ ಪ್ರಾರಂಭ ಮಾಡುವುದು ಎಂದು ತೀರ್ಮಾನಿಸಿ, ಈಶ್ವರಪ್ಪ ನೀರಾವರಿ ಸಚಿವರು ಬಿ.ಎಸ್.ಯಡಿಯೂರಪ್ಪ ಉಪ ಮುಖ್ಯಮಂತ್ರಿ, ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದರು. ಅಧಿಕಾರಿಗಳ ಮನವೊಲಿಸಿ ಮಂಡಳಿಯಲ್ಲಿ ಪಾಸ್ ಮಾಡಿಸಲಾಯಿತು. ಕೊನೆಗೆ ಸಚಿವ ಸಂಪುಟ ಸಭೆಯಲ್ಲಿ ಯಡಿಯೂರಪ್ಪ ಅವರು ಗಟ್ಟಿಯಾಗಿ ಹಿಡಿದರು. ಕಡೆಗೆ ಕುಮಾರಸ್ವಾಮಿಯವರೂ ಒಪ್ಪಬೇಕಾಯಿತು. ಅವರೇ ಅಡಿಗಲ್ಲು ಹಾಕಿ ಕೆಲಸ ಪ್ರಾರಂಭವಾಯಿತು. ಪೂರ್ಣಪ್ರಮಾಣದ ಕೆಲಸವಾಗಲಿಲ್ಲ.

    ನಾನು ನೀರಾವರಿ ಸಚಿವನಾದ ಮೇಲೆ ಅದನ್ನು ಪೂರ್ಣ ಪ್ರಮಾಣದಲ್ಲಿ ಟೆಂಡರ್ ಕರೆದು, 5 ಕಿಮೀ.ಇಂಟರ್ ಲಿಂಕಿಂಗ್ ಕಾಲುವೆಯ ಕಾಮಗಾರಿ ನಮ್ಮ ಅವಧಿಯಲ್ಲಿ ಮಾಡಲಾಯಿತು. ಮುಂದೆ ಬಂದ ಸರ್ಕಾರಗಳು ಏನೂ ಕ್ರಮ ವಹಿಸಲಿಲ್ಲ. ಅಷ್ಟರಲ್ಲಿ ಗೋವಾದವರು ಸುಪ್ರೀಂ ಕೋರ್ಟ್ ಗೆ ಹೋದರು. ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ನ್ಯಾಯಮಂಡಲಿ ರಚಿಸುವುದಾಗಿ ಅಫಿಡವಿಟ್ ನೀಡಿದರು. ಸಣ್ಣ ವ್ಯಾಜ್ಯಕ್ಕೆ ನ್ಯಾಯಮಂಡಲಿ ಬೇಕಿಲ್ಲ ಎಂದು ವಾದಿಸಿದರೂ, ಕೇಂದ್ರ ಸರ್ಕಾರ ಈ ನಿಲುವು ತಾಳಿದ್ದಕ್ಕೆ ಟ್ರಿಬ್ಯುನಲ್ ರಚನೆಯಾಯಿತು. ಇದಾದರೂ 2- 3 ವರ್ಷ ಏನೂ ಕೆಲಸವಾಗಲಿಲ್ಲ. ಪುನಃ ಪ್ರತಿಭಟನೆ ಯಾದ ನಂತರ ಕೆಲಸ ಪ್ರಾರಂಭವಾಯಿತು. ಸುಮಾರು 45 ವರ್ಷ ನ್ಯಾಯಮಂಡಲಿ ವಿಚಾರಣೆ ನಡೆದು ನರೇಂದ್ರ ಮೋದಿಯವರ ಸರ್ಕಾರದಲ್ಲಿ ಟ್ರಿಬ್ಯುನಲ್ ಆದೇಶಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ನರೇಂದ್ರ ಮೋದಿಯವರ ಸರ್ಕಾರ ಅಧಿಸೂಚನೆ ಹೊರಡಿಸುವ ಮೂಲಕ ತಮ್ಮ ಬದ್ಧತೆ ತೋರಿಸಿದ್ದಾರೆ. ನ್ಯಾಯಮಂಡಲಿ ನಿರ್ದೇಶನ ಕೊಡುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ನೀರನ್ನು ಬಳಕೆ ಮಾಡುವುದಿಲ್ಲ ಎಂದು ಅಫಿಡವಿಟ್ ಹಾಕಿತು. ಕಾಂಗ್ರೆಸ್ ಸರ್ಕಾರ ಇದ್ದಾಗ ಸಿದ್ದರಾಮಯ್ಯ ಅವರು ಇಂಟರ್ ಲಿಂಕಿಂಗ್ ಕಾಲುವೆಗೆ ಗೋಡೆ ಕಟ್ಟಿದರು. ಇದು ಅವರ ಸಾಧನೆ. ಇಡೀ ಭಾರತದಲ್ಲಿ ಯಾವುದಾದರೂ ಯೋಜನೆಗೆ ಗೋಡೆ ಕಟ್ಟಿರುವುದು ಇದು ಬಿಟ್ಟರೆ ಮತ್ತೊಂದಿಲ್ಲ ಎಂದರು.


    Provided by
    Provided by

    ಎಲ್ಲ ಅಡಚಣೆಗಳು ದೂರವಾಗಿ ಪರಿಸರ ಹಾಗೂ ಅಂತರರಾಜ್ಯ ವ್ಯಜ್ಯಾಗಳನ್ನೂ ಗಮನದಲ್ಲಿರಿಸಿಕೊಂಡು ಡಿಪಿಆರ್ ಸಿದ್ಧಪಡಿಸಿ, ಒಪ್ಪಿಗೆಯನ್ನೂ ಪಡೆಯಲಾಗಿದೆ. ಡಿಪಿಆರ್ ನಲ್ಲಿ ಹೈಡ್ರೋಲಜಿ ಮತ್ತು ಅಂತರರಾಜ್ಯ ವ್ಯಾಜ್ಯಗಳ ಅಂಶಗಳನ್ನೂ ಕ್ಲಿಯರ್ ಮಾಡಿಕೊಳ್ಳಲಾಗಿದೆ. ನಮ್ಮ ದಾರಿ ಸುಗಮವಾಗಿದ್ದು, ಡಿಪಿಆರ್ ನ ಆದೇಶ ಬಂದಕೂಡಲೇ, ಟೆಂಡರ್ ಕರೆದು, ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

    30 ವರ್ಷದ ಹೋರಾಟಕ್ಕೆ ಜಯ ದೊರೆತಿರುವುದು ಇಡೀ ಉತ್ತರ ಕರ್ನಾಟಕದ ರೈತರಿಗೆ ಜಯ ಸಿಕ್ಕಂತಾಗಿದೆ. ಹಿಂದೆ ಈ ವಿಷಯವಾಗಿ ಆದ ಹೋರಾಟದಲ್ಲಿ ರೈತರ ಮೇಲೆ ಲಾಠಿ ಪ್ರಹಾರವಾಯಿತು. ಇವರೆಲ್ಲರಿಗೂ ಜಯ ಸಿಕ್ಕಿದೆ. ನಾವು ಪ್ರಾರಂಭಿಸಿದ ಹೋರಾಟಕ್ಕೆ ನಾನು ಮುಖ್ಯಮಂತ್ರಿಯಾಗಿರುವ ಹಾಗೂ ಬೆಳಗಾವಿ ಅಧಿವೇಶದ ಸಂದರ್ಭದಲ್ಲಿ ಜಯ ಸಂದಿರುವುದು ಅತ್ಯಂತ ಸಂತೋಷವನ್ನು ತಂದಿದೆ.

    ಟ್ರಿಬ್ಯುನಲ್ ನಲ್ಲಿ ಆಧಿಸೂಚನೆ ಹೊರಡಿಸಿರುವುದರಿಂದ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಹೋರಾಟದಲ್ಲಿ ಭಾಗಿಯಾಗಿರುವ ರೈತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂತೆಗೆದುಕೊಳ್ಳಲು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಯೋಜನೆಯ ಮೂಲಸ್ವರೂಪದಲ್ಲಿ ಯಾವ ಬದಲಾವಣೆಯೂ ಆಗುವುದಿಲ್ಲ  ಎಂದು ತಿಳಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ಇಲ್ಲಿನ ಪಟ್ಟಣದ ಬಸ್ ನಿಲ್ದಾಣದ ಮುಖ್ಯದ್ವಾರದಲ್ಲಿ ಸೋಮವಾರ ಸಂಜೆ ಕೆಎಸ್ಆರ್ಟಿಸಿ ಬಸ್ ಹರಿದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ…

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ

    June 23, 2026

    ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

    June 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.