ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ವಿತರಿಸಿದ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರ ಸಾರ್ವಜನಿಕ ವಿತರಣಾ ಪದ್ಧತಿಯಡಿ ಅರ್ಹ ಫಲಾನುಭವಿಗಳಿಗೆ ಎನ್.ಎಫ್.ಎಸ್.ಎ ಮತ್ತು ಪಿ.ಎಂ.ಜಿ.ಕೆ.ಎ.ವೈ ಯೋಜನೆಯಡಿ ಪಡಿತರವನ್ನು ವಿತರಿಸಲಾಗುತ್ತಿದೆ.
ಪಡಿತರವನ್ನು ಯಾವುದೇ ಪಡಿತರ ಚೀಟಿದಾರರು ಅಥವಾ ಅದರಲ್ಲಿರುವ ಸದಸ್ಯರು ತಮಗೆ ಹಂಚಿಕೆಯಾದ ಆಹಾರ ಧಾನ್ಯವನ್ನು ತಮ್ಮ ಸ್ವಂತ ಲಾಭಕ್ಕಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಅಂತಹವರ ಪಡಿತರ ಚೀಟಿಯನ್ನು 6 ತಿಂಗಳ ಅವಧಿಗೆ ಅಮಾನತ್ತುಪಡಿಸುವ ಕ್ರಮ ವಹಿಸಲಾಗುವುದು.
ಮಾರಾಟ ಮಾಡಿರುವಂತಹ ಆಹಾರ ಧಾನ್ಯ ಪ್ರಮಾಣಕ್ಕನುಗುಣವಾಗಿ ಮುಕ್ತ ಮಾರುಕಟ್ಟೆಯ ದರದಂತೆ ದಂಡವನ್ನು ವಿಧಿಸಿ ಸರ್ಕಾರದ ಲೆಕ್ಕ ಶೀರ್ಷಿಕೆಗೆ ಜಮಾ ಮಾಡುವ ಕ್ರಮ ವಹಿಸುವಂತೆ ಸರ್ಕಾರವು ಆದೇಶಿಸಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy