ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಆ ಹಿನ್ನೆಲೆಯಲ್ಲಿ ತುಮಕೂರು ನಗರದಲ್ಲಿ ಈಗಾಗಲೇ ಎರಡು ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಿದೆ. (Vidya First Grade College & Sacred Heart First Grade College).
ಪ್ರಸ್ತುತ ತುಮಕೂರು ಜಿಲ್ಲೆಯ ನಗರ ಮತ್ತು ಪ್ರತಿ ತಾಲ್ಲೂಕು ಕೇಂದ್ರಗಳಲ್ಲೂ ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು (ಅಧ್ಯಯನ ಕೇಂದ್ರಗಳನ್ನು) ತಾಲ್ಲೂಕಿನ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿಯ ಅಧಿಕೃತ ವೆಬ್‍ಸೈಟ್ www.ksoumysuru.ac.inನಲ್ಲಿ ಅನ್‍ಲೈನ್‍ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಭರ್ತಿ ಮಾಡಿದ ಅರ್ಜಿಯನ್ನು ಡೀನ್ (ಅಧ್ಯಯನ ಕೇಂದ್ರ) ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತಗಂಗೋತ್ರಿ, ಮೈಸೂರು-06 ಇಲ್ಲಿಗೆ ಸಲ್ಲಿಸುವುದು.
ಮುಂದುವರೆದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಯಾವುದೇ ಶುಲ್ಕ ಪಾವತಿ ಮಾಡುವಂತಿಲ್ಲ. ಮುಕ್ತ ವಿವಿಗೆ ಪ್ರವೇಶಾತಿ ಪೆಡೆಯುವ ವಿದ್ಯಾರ್ಥಿಗಳು ಪ್ರವೇಶಾತಿ ಅರ್ಜಿಗಳನ್ನು ಕಲಿಕಾರ್ಥಿ ಸಹಾಯ ಕೇಂದ್ರಗಳಲ್ಲೂ ಅನ್‍ಲೈನ್ ಮುಖಾಂತರ ಸಲ್ಲಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ. ಆರ್ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ವಿವರಗಳಿಗಾಗಿ ಡಾ.ಲೋಕೇಶ. ಆರ್, ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಪ್ರಾದೇಶಿಕ ಕೇಂದ್ರ ತುಮಕೂರು, ಮೆಳೆಕೋಟೆ, ಗಂಗಸಂದ್ರ ಮುಖ್ಯರಸ್ತೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, ಅನ್ನು ಸಂಪರ್ಕಿಸಬಹುದಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


