nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026
    Facebook Twitter Instagram
    ಟ್ರೆಂಡಿಂಗ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    • ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್
    • ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ
    • ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
    • ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » SSLC ಫಲಿತಾಂಶವನ್ನು ಉತ್ತಮಗೊಳಿಸಲು ಕಲಿಕಾಸರೆ ಕೇಂದ್ರ: ಶಾಸಕ ಹೆಚ್.ವಿ. ವೆಂಕಟೇಶ್
    ತುಮಕೂರು December 7, 2024

    SSLC ಫಲಿತಾಂಶವನ್ನು ಉತ್ತಮಗೊಳಿಸಲು ಕಲಿಕಾಸರೆ ಕೇಂದ್ರ: ಶಾಸಕ ಹೆಚ್.ವಿ. ವೆಂಕಟೇಶ್

    By adminDecember 7, 2024No Comments2 Mins Read
    h v venkatesh

    ತುಮಕೂರು: SSLC ವಿದ್ಯಾರ್ಥಿಗಳ ಫಲಿತಾಂಶವನ್ನು ಉತ್ತಮಪಡಿಸಲು ಪಾವಗಡ ತಾಲ್ಲೂಕಿನಲ್ಲಿ 10 ಕಲಿಕಾಸರೆ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್ ತಿಳಿಸಿದರು.

    ಪಾವಗಡದಲ್ಲಿಂದು ಕಲಿಕಾಸರೆ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕಲಿಕಾ ಆಸರೆ ಕೇಂದ್ರದ ಸದುಪಯೋಗ ಪಡೆದುಕೊಂಡು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವ ಮೂಲಕ ಶಾಲೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕೆಂದು ಕರೆ ನೀಡಿದರು.


    Provided by
    Provided by

    ಕಲಿಕಾ ಆಸರೆ ಕೇಂದ್ರಗಳಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರದಂದು ಸರ್ಕಾರಿ/ಅನುದಾನಿತ ಪ್ರೌಢಶಾಲೆಗಳ ಮಕ್ಕಳಿಗೆ ಓದುವ ಮತ್ತು ಬರವಣಿಗೆಯ ಕೌಶಲ್ಯಗಳನ್ನು ಬೋಧಿಸಲಾಗುವುದು. ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡಬೇಕೆಂದು ಅವರು ತಿಳಿಸಿದರು.

    ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಕಲಿಕಾ ಆಸರೆ ಕೇಂದ್ರಗಳಲ್ಲಿ ಅನುಭವಾತ್ಮಕ ಕಲಿಕೆಯ ಮೂಲಕ ಮಕ್ಕಳಿಗೆ ಶಿಕ್ಷಣದ ಜೊತೆ–ಜೊತೆಗೆ ಮಾಹಿತಿ ಮತ್ತು ತಂತ್ರಜ್ಞಾನದ ವೇಗದ ಬದಲಾವಣೆಗಳ ಬಗ್ಗೆ ತಿಳಿಸಲಾಗುವುದು. ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸುವ ಸಲುವಾಗಿ ಪಾಸಿಂಗ್ ಪ್ಯಾಕೇಜ್, ರಸಪ್ರಶ್ನೆ ಕೋಠಿಯನ್ನು ರೂಪಿಸಲಾಗಿದೆಯಲ್ಲದೆ 6 ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ತಯಾರಿಸಿ ವಿದ್ಯಾರ್ಥಿಗಳ ಅಭ್ಯಾಸಕ್ಕಾಗಿ ಒದಗಿಸಲಾಗುವುದು ಎಂದು ತಿಳಿಸಿದರು.
    ರಾಮಕೃಷ್ಣಾಶ್ರಮದ ಜಪಾನಂದಜೀ ಮಾತನಾಡಿ, ವಿದ್ಯಾರ್ಥಿಗಳು ಬದ್ಧತೆಯಿಂದ ಅಧ್ಯಯನಶೀಲರಾಗಬೇಕು. ಪಠ್ಯ ವಿಷಯಗಳನ್ನು ಪುನರ್–ಮನನ ಮಾಡುವುದರಿಂದ ಉತ್ತಮ ಅಂಕಗಳನ್ನು ಗಳಿಸಲು ಸಾಧ್ಯವಿದೆ ಎಂದು ಸಲಹೆ ನೀಡಿದರು.

    ಸಮರ್ಪಕ ಸೇವಾ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಎಸ್. ರಾಜಣ್ಣ ಮಾತನಾಡಿ, ಟ್ರಸ್ಟ್ ವತಿಯಿಂದ ಕಲಿಕಾಸರೆ ಕೇಂದ್ರಗಳ ನಿರ್ವಹಣೆಯನ್ನು ಮಾಡಲಾಗುವುದು. ಕಲಿಕಾಸರೆ ಕೇಂದ್ರದಲ್ಲಿ ತಾಲ್ಲೂಕಿನ ಎಲ್ಲಾ ಶಾಲೆಗಳಲ್ಲಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡಿಸಲಾಗುವುದು ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಮಧುಗಿರಿ ಡಯಟ್ ವತಿಯಿಂದ ಸಿದ್ಧಪಡಿಸಲಾದ ಕ್ಷಮತೆ, ಅನುಭವಾತ್ಮಕ ಕಲಿಕೆ, 6–8ನೇ ತರಗತಿ ಬೋಧಿಸುತ್ತಿರುವ ವಿಷಯ ಸಂಪದೀಕರಣ ತರಬೇತಿ ಸಾಹಿತ್ಯ, ತೀವ್ರ ಜ್ಞಾನ ಸಂವರ್ಧನಾ ಕಲಿಕೆ ಅನುಷ್ಟಾನದ ವರದಿ, ದಸರಾಸಿರಿ, ಜ್ಞಾನ ಭಾರತಿ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.

    ಪುರಸಭಾಧ್ಯಕ್ಷ ಪಿಎಚ್ ರಾಜೇಶ್, ಸಮರ್ಪಕ ಸೇವಾ ಟ್ರಸ್ಟ್ ರಾಜಣ್ಣ, ಡಿ ಡಿ ಪಿ ಐ ಗಿರಿಜಾ, ಇಓ ಜಾನಕಿರಾಮ್, ಬಿಇಓ ಇಂದ್ರಾಣಮ್ಮ, ರಾಜ್ಯ ಸಂಪನ್ಮೂಲ ವ್ಯಕ್ತಿ ನವೀನ್ ಕಿಲಾರ್ಲಹಳ್ಳಿ, ಬಿ ಆರ್ ಸಿ ವೆಂಕಟೇಶ್, ಈಸಿಓ ವೇಣುಗೋಪಾಲ್ ರೆಡ್ಡಿ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಯತಿಕುಮಾರ್, ಶಾಲೆಯ ಪ್ರಾಂಶುಪಾಲರಾದ ಲತಾ, ಸೇರಿದಂತೆ ತಾಲೂಕಿನ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    June 6, 2026

    ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ

    June 6, 2026

    ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ

    June 6, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    ಕುಣಿಗಲ್: ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರನ್ನು ಅಂಚೆ ಪಾಳ್ಯದ ಕೈಗಾರಿಕಾ ವಲಯದದಲ್ಲಿ ಶಾಸಕ ಡಾ.ಎಚ್.ಡಿ.ರಂಗನಾಥ್ ಹಾಗೂ ಕಾಂಗ್ರೆಸ್…

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    June 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.