ಮಿಜೋರಾಂನ ಕಲ್ಲುಕ್ವಾರಿ ದುರಂತದಲ್ಲಿ ಮೃತಪಟ್ಟ ಬಿಹಾರದ 8 ಕಾರ್ಮಿಕರ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ವರದಿಯಾಗಿದೆ. ಸೋಮವಾರ ಸಂಜೆ ಕಲ್ಲುಕ್ವಾರಿ ಕುಸಿದಿದ್ದು, ಅದರಡಿ 12 ಮಂದಿ ಸಿಲುಕಿದ್ದರು. ಇನ್ನೂ ನಾಲ್ವರಿಗಾಗಿ ಹುಡುಕಾಟ ಮುಂದುವರಿದಿದೆ.
ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಎಲ್ಲ ಕಾರ್ಮಿಕರು ಪತ್ತೆಯಾಗುವವರೆಗೂ ಕಾರ್ಯಾಚರಣೆ ನಡೆಯಲಿದೆಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ.
ಹ್ನಾಥಿಯಾಲ್ ಜಿಲ್ಲೆಯ ಮೌದರ್ಹ್‌ನಲ್ಲಿರುವ ಖಾಸಗಿ ಕಂಪನಿಯ ಕಾರ್ಮಿಕರು ಊಟದ ವಿರಾಮದ ಬಳಿಕ ಕೆಲಸದಲ್ಲಿ ತೊಡಗಿದ್ದಾಗ ಅವಘಡ ಸಂಭವಿಸಿದೆ. ಕಾರ್ಮಿಕರ ಜೊತೆಗೆ ಐದು ಹಿಟಾಚಿ ಯಂತ್ರಗಳು ಮತ್ತು ಇತರ ಡ್ರಿಲ್ಲಿಂಗ್ ಯಂತ್ರಗಳು ಅವಶೇಷಗಳ ಅಡಿಯಲ್ಲಿ ಸಿಲುಕಿವೆ ಎನ್ನಲಾಗಿದೆ.
ಲೀಟೆ ಮತ್ತು ನಾತಿಯಾಲ್ ಗ್ರಾಮಗಳ ಜನರು ಸ್ವಯಂಪ್ರೇರಿತರಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ, ಗಡಿ ಭದ್ರತಾ ಪಡೆ ಮತ್ತು ಅಸ್ಸಾಂ ರೈಫಲ್ಸ್ ಪಡೆಯನ್ನು ರಕ್ಷಣಾ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy