ಬೆಳಗಾವಿ : ಗಡಿ ವಿವಾದದ ಮಧ್ಯೆಯೇ ಎನ್‌ಸಿಪಿ ಶಾಸಕ ರೋಹಿತ್ ಪವಾರ್ ಕದ್ದುಮುಚ್ಚಿ ರಾತ್ರೋರಾತ್ರಿ ಬೆಳಗಾವಿಗೆ ಭೇಟಿ ನೀಡಿ ವಾಪಾಸ್ ಆಗಿದ್ದಾರೆ.ಮಹಾ ವಿಕಾಸ ಅಘಾಡಿ ನಾಯಕರ ಸೂಚನೆ ಮೇರೆಗೆ ರೋಹಿತ್ ಪವಾರ್ ಬೆಳಗಾವಿ ಭೇಟಿ ನೀಡಿದ್ದಾರೆ ಎನ್ನಲಾಗ್ತಿದೆ.
ಗಡಿ ಉಸ್ತುವಾರಿ ಸಚಿವರ ಬೆಳಗಾವಿ ಭೇಟಿ ರದ್ದು ಖಂಡಿಸಿ ಮಹಾ ವಿಕಾಸ ಅಘಾಡಿ ಪ್ರತಿಭಟನೆ ನಡೆಸಿತ್ತು. ಇದಾದ ಬಳಿಕ ರೋಹಿತ್ ಪವಾರ್ ಅವರಿಗೆ ಬೆಳಗಾವಿಗೆ ಬರುವಂತೆ ಮನವಿ ಮಾಡಿದ್ದು ರಾತ್ರೋರಾತ್ರಿ ರೋಹಿತ್ ಪವಾರ್ ಬೆಳಗಾವಿಗೆ ಭೇಟಿ ನೀಡಿ ವಾಪಾಸ್ ಆಗಿದ್ದಾರೆ.
ರೋಹಿತ್ ಪವಾರ್ ಪುಣೆ ಜಿಲ್ಲೆಯ ಕರ್ಜತ್-ಜಮ್ಕೆಡ್ ವಿಧಾನಸಭೆ ಕ್ಷೇತ್ರದ ಎನ್‌ಸಿಪಿ ಶಾಸಕರಾಗಿದ್ದಾರೆ. ರೋಹಿತ್ ಪವಾರ್ ನಿನ್ನೆ ರಾತ್ರಿ ಕೊಲ್ಲಾಪುರ- ಕುಗನೊಳ್ಳಿ ಮಾರ್ಗವಾಗಿ ಬೆಳಗಾವಿಗೆ ಆಗಮಿಸಿದರು ಎಂದು ತಿಳಿದುಬಂದಿದೆ.
ಮಂಗಳವಾರ ಬೆಳಗ್ಗೆ ಬೆಳಗಾವಿ ತಾಲೂಕಿನ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದಾರೆ. ಅನಾರೋಗ್ಯಕ್ಕೆ ತುತ್ತಾಗಿರುವ ಎಂಇಎಸ್ ಬೆಳಗಾವಿ ನಗರ ಅಧ್ಯಕ್ಷ ದೀಪಕ್ ದಳವಿ ಮನೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದಾರೆ.
ಗಡಿ ಹೋರಾಟದಲ್ಲಿ ಗಲಭೆ ಸೃಷ್ಟಿಸಿ ಗೋಲಿಬಾರ್‌ಗೆ ತುತ್ತಾದ 11 ಎಂಇಎಸ್ ಕಾರ್ಯಕರ್ತರ ಹೆಸರಿನಲ್ಲಿ ನಿರ್ಮಿಸಲಾದ ಹುತಾತ್ಮ ಸ್ಮಾರಕಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸಿದ್ದಾರೆ. ರೋಹಿತ್ ಪವಾರ್‌ಗೆ ಸ್ಥಳೀಯ ಎಂಇಎಸ್ ಕಾರ್ಯಕರ್ತರು ಸಾಥ್ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy