ಕಾಲುಜಾರಿ ಹೊಂಡಕ್ಕೆ ಬಿದ್ದು ಬಾಲಕಿ ಮತ್ತು ಯುವತಿ ಸಾವನ್ನಪ್ಪಿರುವ ಘಟನೆ ಕಲಬುರುಗಿಯಲ್ಲಿ ನಡೆದಿದೆ.
ಕಲಬುರುಗಿ ಜಿಲ್ಲೆ ಶಹಬಾದ್ ತಾಲ್ಲೂಕು ರಾಮಘಡ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು ಮಾಣಕಮ್ಮದಾಸರ(20), ಕೀರ್ತೀಕಾ(12) ಮೃತಪಟ್ಟವರು. ಮೃತರು ಬಟ್ಟೆ ತೊಳೆಯಲು ಹೊಂಡದ ಬಳಿ ಹೋಗಿದ್ದರು. ಈ ವೇಳೆ ಕಾಲು ಜಾರಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಈ ಕುರಿತು ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


