ತಿಪಟೂರು: ಶ್ರೀ ಸತ್ಯ ಗಣಪತಿ ವಿಸರ್ಜನ ಮಹೋತ್ಸವದ ಅಂಗವಾಗಿ ಡಿಸೆಂಬರ್ 7ರಂದು ನಗರದ ಕಲಾ ಕೃತಿ ತಂಡದಿಂದ ಕೆ.ಆರ್. ಬಡಾವಣೆ, ಬಯಲು ರಂಗ ಮಂದಿರದಲ್ಲಿ ಕಲ್ಪತರು ನಾಡಹಬ್ಬ ಕಲ್ಪೋತ್ಸವ 2024 ನಡೆಯಲಿದ್ದು, ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಕೆ.ಷಡಕ್ಷರಿ ಉದ್ಘಾಟಿಸಲಿದ್ದು, ಈ ಕಾರ್ಯಕ್ರಮದಲ್ಲಿ ಸಾಹಿತ್ಯ ನಾಡೋಜ ಬರಗೂರು ರಾಮಚಂದ್ರಪ್ಪ ಅವರಿಗೆ ಕಲ್ಪತರು ರತ್ನ ಪ್ರಶಸ್ತಿ ಮಾಡಲಾಗುವುದು ಎಂದು ಕಲಾ ಕೃತಿ ತಂಡದ ಅಧ್ಯಕ್ಷರಾದ ಡಾ. ಶ್ರೀಧರ್ ತಿಳಿಸಿದರು.
ಈ ಸಂಬಂಧ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಕರೋನ ಸಂದರ್ಭದಲ್ಲಿ ಹೆತ್ತವರನ್ನು ಕಳೆದುಕೊಂಡ ತಿಪಟೂರು ತಾಲೂಕಿನ 1200ಕ್ಕೂ ಹೆಚ್ಚು ಮಕ್ಕಳಿಗೆ ಸತ್ಯಕುಮಾರ್ ರಿಲೀಫ್ ಫೌಂಡೇಶನ್ ನಿಂದ ಉಚಿತ ಶಾಲಾ ಪರಿಕರಗಳನ್ನು ಮಾಡಲಾಗುವುದು ಎಂದು ಇದೇ ವೇಳೆ ಅವರು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಶ್ರೀ ಗುರು ಪರದೇಶಿಕೇಂದ್ರ ಸ್ವಾಮೀಜಿ, ಡಾ.ಅಭಿನವ ಮಲ್ಲಿಕಾರ್ಜುನ ಸ್ವಾಮೀಜಿ ಮತ್ತು ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಝೀ ಕನ್ನಡ ವಾಹಿನಿಯ ಡಾನ್ಸ್ ಕರ್ನಾಟಕ ಡಾನ್ಸ್ ತಂಡದಿಂದ ಕಾರ್ಯಕ್ರಮವನ್ನು ನೀಡಲಾಗುತ್ತದೆ ಎಂದು ತಿಳಿಸಿದರು.
ವರದಿ: ಆನಂದ್, ತಿಪಟೂರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx