ಬೆಂಗಳೂರು: ನಗರದಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ (Under Construction Building) ಕಾಲು ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜರುಗಿದೆ.
ತಮಿಳುನಾಡು ಮೂಲದ ಏಳುಮಲೈ (42) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಏಳುಮಲೈ ನಿರ್ಮಾಣ ಹಂತದ ಕಟ್ಟಡದಿಂದ ಕಾಲು ಜಾರಿ ಬಿದ್ದಿದ್ದರು. ನಾಗರಬಾವಿಯ ಎನ್ ಜಿಇಎಫ್ ಲೇಔಟ್ ನಲ್ಲಿ ಘಟನೆ ಜರುಗಿತ್ತು.
ಕಟ್ಟಡ ಕಾಮಗಾರಿ ಮಾಡುತಿದ್ದ ವೇಳೆ, ರಾತ್ರಿ 7 ಗಂಟೆ ಸುಮಾರು ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಮೆಟ್ಟಿಲು ಬಳಸಿ ಇಳಿಯುತಿದ್ದಾಗ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ತಲೆಗೆ (Head) ಗಂಭೀರ ಗಾಯವಾಗಿದೆ. ಏಳುಮಲೈ ಅವರನ್ನು ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ (Victoria Hospital) ದಾಖಲಿಸಲಾಗಿದೆ.
ಆದರೆ ಚಿಕಿತ್ಸೆ ಫಲಿಸದೇ ಏಳುಮಲೈ ಅಸುನೀಗಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ನಾಲ್ವರ ವಿರುದ್ಧ ಎಫ್ ಐಆರ್ (FIR) ಕೂಡ ದಾಖಲಾಗಿದೆ. ಮಾಲೀಕ ಮುನಿರಾಜು ಬಾಬು, ಶಿವಶಂಕರ್ ಚೌಧರಿ, ಕಾಂಟ್ರ್ಯಾಕ್ಟರ್ ಗಳಾದ ಶಕ್ತಿವೇಲು ಹಾಗೂ ವಾದಿವೇಲು ವಿರುದ್ಧ ಎಫ್ಐಆರ್ ಹಾಕಲಾಗಿದೆ.
ವರದಿ: ಆಂಟೋನಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB