ಹಾಸನ: ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ಹಾಸನ ಜಿಲ್ಲೆ ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದ್ದು, ವಿದ್ಯಾರ್ಥಿಯರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಿನ್ನೆ ರಾತ್ರಿ ಊಟ ಸೇವಿಸಿದ ನಂತರ ವಿದ್ಯಾರ್ಥಿನಿಯರಲ್ಲಿ ವಾಂತಿ, ಭೇದಿ ಶುರುವಾಗಿದ್ದು, ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿದ್ದರು.
ತಕ್ಷಣವೇ ವಿದ್ಯಾರ್ಥಿನಿಯರನ್ನು ಆಲೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಕ್ಕಳನ್ನು ಹಾಸನ ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz