ಕಲುಷಿತ ನೀರು ಕುಡಿದು ಕಳೆದ 3 ದಿನಗಳಲ್ಲಿ ಗ್ರಾಮದ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಆಘಾತಕಾರಿ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ನಡೆದಿದೆ. ದೀಪಾವಳಿ ಸಂಭ್ರಮದಲ್ಲಿ ಇರಬೇಕಿದ್ದ ಮುದೇನೂರು ಗ್ರಾಮದ ಜನ ಆಸ್ಪತ್ರೆಗಳಿಗೆ ಅಲೆದಾಡುತ್ತಿದ್ದಾರೆ.
ಅಸ್ವಸ್ಥಗೊಂಡ 50ಕ್ಕೂ ಹೆಚ್ಚು ಜನರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 5 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಚರಂಡಿ ನೀರು ಮಿಶ್ರಣವಾಗಿತ್ತು. ಇದನ್ನು ತಿಳಿದರೂ ಗ್ರಾಮ ಪಂಚಾಯಿತಿ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದಕ್ಕೆ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.
ಗ್ರಾಮಕ್ಕೆ ಶಾಸಕ ಮಹದೇವಪ್ಪ ಯಾದವಾಡ ಭೇಟಿ ನೀಡಿದ್ದು, ಅಸ್ವಸ್ಥರಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


