nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ: ಜಾಗೃತಿ  ಕಾರ್ಯಕ್ರಮದಲ್ಲಿ ಡಾ.ತಿಪ್ಪೇಸ್ವಾಮಿ ಕೆ.ಟಿ.

    October 30, 2026

    ಹೆಚ್ಚಳದ ಮೊತ್ತ ರೈತರಿಗೇ ಸಿಗಲಿದೆ: ಹಾಲಿನ ದರ ಏರಿಕೆ ಪ್ರಶ್ನೆಗೆ ಸಿಎಂ ಡಿಕೆಶಿ ಉತ್ತರ

    October 30, 2026

    ‘ಐ ಲವ್ ಯೂ ಚಿನ್ನು’ ಎಂದು ಮೆಸೇಜ್ ಮಾಡುತ್ತಿದ್ದ ಉಪನ್ಯಾಸಕನ ಗ್ರಹಚಾರ ಬಿಡಿಸಿದ ವಿದ್ಯಾರ್ಥಿನಿಯರು!

    October 30, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ: ಜಾಗೃತಿ  ಕಾರ್ಯಕ್ರಮದಲ್ಲಿ ಡಾ.ತಿಪ್ಪೇಸ್ವಾಮಿ ಕೆ.ಟಿ.
    • ಹೆಚ್ಚಳದ ಮೊತ್ತ ರೈತರಿಗೇ ಸಿಗಲಿದೆ: ಹಾಲಿನ ದರ ಏರಿಕೆ ಪ್ರಶ್ನೆಗೆ ಸಿಎಂ ಡಿಕೆಶಿ ಉತ್ತರ
    • ‘ಐ ಲವ್ ಯೂ ಚಿನ್ನು’ ಎಂದು ಮೆಸೇಜ್ ಮಾಡುತ್ತಿದ್ದ ಉಪನ್ಯಾಸಕನ ಗ್ರಹಚಾರ ಬಿಡಿಸಿದ ವಿದ್ಯಾರ್ಥಿನಿಯರು!
    • ದರ್ಶನ್ ಹಾಗೂ ಕುಟುಂಬದ ವಿರುದ್ಧ ಮಾತನಾಡದಂತೆ ನಟ ಧನ್ವೀರ್ ಗೆ ಕೋರ್ಟ್ ತಡೆ
    • ಯುಜಿ ನೀಟ್‌–ಆಯುಷ್‌ 2026: ದ್ವಿತೀಯ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್‌ ಎಂಟ್ರಿ ಆರಂಭ
    • ತಿಪಟೂರು: ಪುನೀತ್ ರಾಜ್‌ ಕುಮಾರ್ ಅವರ 5ನೇ ಪುಣ್ಯಸ್ಮರಣೆ: ಅನ್ನದಾನ, ರಕ್ತದಾನ ಕಾರ್ಯಕ್ರಮ
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಕ್ಯಾನ್ಸರ್ ಪೀಡಿತ ರೋಗಿಗೆ ₹20,000 ಕ್ರಿಟಿಕಲ್ ಇಲ್ನೆಸ್ ಫಂಡ್ ಮಂಜೂರಾತಿ ಪತ್ರ ವಿತರಣೆ
    • ಸಿದ್ಧರಬೆಟ್ಟದ ಅನ್ನ ದಾಸೋಹದ ಹೆಚ್ಚುವರಿ ಅಕ್ಕಿ ಬಹಿರಂಗ ಹರಾಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ಬಿಜೆಪಿಯಿಂದ ಅನ್ಯಾಯ: ಪ್ರಿಯಾಂಕ್ ಖರ್ಗೆ
    ರಾಜ್ಯ ಸುದ್ದಿ December 27, 2022

    ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ಬಿಜೆಪಿಯಿಂದ ಅನ್ಯಾಯ: ಪ್ರಿಯಾಂಕ್ ಖರ್ಗೆ

    By adminDecember 27, 2022No Comments2 Mins Read
    priyank kharge

    ಕಲ್ಯಾಣ ಕರ್ನಾಟಕ ಭಾಗದಲ್ಲಿ, ತೊಗರಿ ಬೆಳೆ ನೆಟೆರೋಗದಿಂದ ಸಂಪೂರ್ಣವಾಗಿ ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ. ಆದರೆ ಬಿಜೆಪಿ ಸರ್ಕಾರ ಮಾತ್ರ ಯಾವುದೇ ಸಮೀಕ್ಷೆಯನ್ನು ನಡೆಸದೆ, ಪರಿಹಾರವನ್ನು ನೀಡದೆ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

    ಸರ್ಕಾರ ನೆಟೆರೋಗದಿಂದ ಹಾನಿಗೊಳಗಾದ ತೊಗರಿ ಬೆಳೆಗಾರರಿಗೆ 500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸುವ ಮೂಲಕ ಪ್ರತಿ ಎಕರೆ ಪ್ರದೇಶಕ್ಕೆ 25,000 ನಷ್ಟ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ಅವರು ತಿಳಿಸಿದ್ದಾರೆ.

    ಇಡೀ ಏಷ್ಯಾ ಖಂಡದಲ್ಲೇ ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಬೆಳೆಯನ್ನು ಹೆಚ್ಚಾಗಿ ಬೆಳೆಯುತ್ತಿರುವುದರಿಂದ ಈ ಜಿಲ್ಲೆಗೆ ತೊಗರಿಯ ಕಣಜ ಎಂದೇ ಕರೆಯಲಾಗುತ್ತಿದೆ. ಈ ಭಾಗದ ರೈತರ ಪ್ರಮುಖ ಬೆಳೆಯಾದ ತೊಗರಿ ಇಲ್ಲಿನ ಜಮೀನಿಗಳಲ್ಲಿ ಹೆಚ್ಚಾಗಿ ಬಿತ್ತನೆ ಮಾಡಲಾಗುತ್ತಿದ್ದು, ಕಲಬುರಗಿ ಜಿಲ್ಲೆಯ ತೊಗರಿ ದೇಶದ ನಾನಾ ಭಾಗಗಳಿಗೆ ರವಾನೆ ಮಾಡಲಾಗುತ್ತಿದೆ. ಆದರೆ ಇತ್ತೀಚೆಗೆ ಎರಡು ವರ್ಷಗಳಿಂದ ಮಳೆ ಹೆಚ್ಚಿನ ಪ್ರಮಾಣದಲ್ಲಿ ಬೀಳುತ್ತಿರುವುದರಿಂದಾಗಿ ನಿರೀಕ್ಷಿತ ಪ್ರಮಾಣದಲ್ಲಿ ತೊಗರಿ ಫಸಲು ಬರುತ್ತಿಲ್ಲ ಎನ್ನುವುದು ಈ ಭಾಗದ ರೈತರ ಅಳಲಾಗಿದೆ.

    ಈ ನಡುವೆ 2022-23 ರ ಸಾಲಿನಲ್ಲಿ 5.50 ಲಕ್ಷ ಹೆಕ್ಟೇ‌ರ್ ಪ್ರದೇಶದಲ್ಲಿ, ತೊಗರಿ ಬಿತ್ತನೆ ಗುರಿ ಹೊಂದಲಾಗಿತ್ತು. ಅದರಲ್ಲಿ 4.78 ಲಕ್ಷ ಹೆಕ್ಟೇರ್ ಬಿತ್ತನೆ ಮಾಡಲಾಗಿದೆ. ಆದರೆ, ಜಿಲ್ಲೆಯಲ್ಲಿ ಸುರಿದ ಅನಿಯಮಿತ ಮಳೆಯಿಂದಾಗಿ ಸುಮಾರು 1.30 ಲಕ್ಷ ಹೆಕ್ಟೇರ್ ಬಿತ್ತನೆ ಪ್ರದೇಶ ಸಂಪೂರ್ಣ ಹಾಳಾಗಿದೆ. ಎಡೆಬಿಡದೆ ಸುರಿದ ಮಳೆಯ ಪರಿಣಾಮ ಅತಿವೃಷ್ಟಿ ಸೃಷ್ಟಿಯಾಗಿ ತೊಗರಿ ಗಿಡಗಳು ಒಣಗ ತೊಡಗಿದ್ದು, ಆದರೂ ಕೂಡಾ ಅಷ್ಟೋ ಇಷ್ಟೋ ಫಸಲಿನ ನಿರೀಕ್ಷೆಯಲ್ಲಿದ್ದ ರೈತರು ಇದೀಗ ತೊಗರಿ ಬೆಳೆಗೆ ನೆಟೆ ರೋಗ ಕಾಣಿಸಿಕೊಂಡ ನಂತರ ತೀವ್ರ ಕಂಗಾಲಾಗಿದ್ದಾರೆ ಎಂದು ತಿಳಿಸಿದ್ದಾರೆ.

    ತೊಗರಿ ಬೆಳೆಯ ಅದ್ಭುತ ಫಸಲಿನ ಕನಸು ಕಂಡಿದ್ದ ರೈತರಿಗೆ ಮೊದಲು ಅತಿವೃಷ್ಟಿ ಹೊಡೆತ ಕೊಟ್ಟರೆ, ಈಗ ನೆಟೆರೋಗ, ಭಾರೀ ಹೊಡೆತ ಕೊಟ್ಟಿದ್ದು ರೈತಾಪಿವರ್ಗ ತೀವ್ರ ಸಂಕಷ್ಟಕ್ಕೆ ಗುರಿಯಾಗಿದೆ. ಒಂದು ಅಂದಾಜಿನ ಪ್ರಕಾರ ಬಿತ್ತನೆಯಾದ 4,78 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 1.30 ಲಕ್ಷ ಹೆಕ್ಟೇರ್, ಅತಿವೃಷ್ಟಿಯಿಂದ ಹಾಳಾದರೆ, ಉಳಿದುದರಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಹೆಕ್ಟೇರ್ ಪ್ರದೇಶ ನೆಟೆರೋಗದಿಂದ ಸಂಪೂರ್ಣ ಹಾಳಾಗಿದೆ. ಅಲ್ಲಿಗೆ ಅತಿವೃಷ್ಟಿ ಹಾಗೂ ನೆಟೆ ರೋಗದಿಂದ ಹಾಳಾದ ಬೆಳೆಯ ಪ್ರಮಾಣ ಶೇ 80% ರಿಂದ 90% ಅಂದಾಜಿಸಲಾಗಿದೆ. ಈ ನಷ್ಟವನ್ನು ಅಳಿದುಳಿದ ಬೆಳೆಯಿಂದ ತುಂಬಿಸಿಕೊಳ್ಳುವುದು ಹೇಗೆ ಎನ್ನುವ ಚಿಂತೆ ರೈತರನ್ನು ಮತ್ತಷ್ಟು ಹೈರಾಣಾಗಿಸಿದೆ ಎಂದಿದ್ದಾರೆ.

    ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಬೆಳೆಗಳು ಹಾನಿಯಾದಾಗ ವಿಶೇಷ ಪ್ಯಾಕೇಜ್ ನೀಡುವಂತೆ, ಈಗ ನೆಟೆ ರೋಗದಿಂದ ಹಾನಿಗೊಳಗಾದ ರಾಜ್ಯದ ತೊಗರಿ ಬೆಳೆಗಾರರಿಗೆ 500 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ರೈತರ ನೋವಿಗೆ ಸ್ಪಂದಿಸಿ ಜೊತೆಗೆ ಪ್ರತಿ ಎಕರೆ ಪ್ರದೇಶಕ್ಕೆ 25,000 ನಷ್ಟ ಪರಿಹಾರ ಬಿಡುಗಡೆ ಮಾಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಹೆಚ್ಚಳದ ಮೊತ್ತ ರೈತರಿಗೇ ಸಿಗಲಿದೆ: ಹಾಲಿನ ದರ ಏರಿಕೆ ಪ್ರಶ್ನೆಗೆ ಸಿಎಂ ಡಿಕೆಶಿ ಉತ್ತರ

    October 30, 2026

    ‘ಐ ಲವ್ ಯೂ ಚಿನ್ನು’ ಎಂದು ಮೆಸೇಜ್ ಮಾಡುತ್ತಿದ್ದ ಉಪನ್ಯಾಸಕನ ಗ್ರಹಚಾರ ಬಿಡಿಸಿದ ವಿದ್ಯಾರ್ಥಿನಿಯರು!

    October 30, 2026

    ದರ್ಶನ್ ಹಾಗೂ ಕುಟುಂಬದ ವಿರುದ್ಧ ಮಾತನಾಡದಂತೆ ನಟ ಧನ್ವೀರ್ ಗೆ ಕೋರ್ಟ್ ತಡೆ

    October 30, 2026

    Comments are closed.

    Our Picks

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ: ಜಾಗೃತಿ  ಕಾರ್ಯಕ್ರಮದಲ್ಲಿ ಡಾ.ತಿಪ್ಪೇಸ್ವಾಮಿ ಕೆ.ಟಿ.

    October 30, 2026

    ನಮ್ಮ ತುಮಕೂರು/ಹಗರಿಬೊಮ್ಮನಹಳ್ಳಿ (ವಿಜಯನಗರ):  ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಮತ್ತು ಬಾಲ್ಯ ವಿವಾಹ ಮುಕ್ತ ಸಮಾಜ ನಿರ್ಮಿಸುವುದು ಕೇವಲ ಸರ್ಕಾರದ…

    ಹೆಚ್ಚಳದ ಮೊತ್ತ ರೈತರಿಗೇ ಸಿಗಲಿದೆ: ಹಾಲಿನ ದರ ಏರಿಕೆ ಪ್ರಶ್ನೆಗೆ ಸಿಎಂ ಡಿಕೆಶಿ ಉತ್ತರ

    October 30, 2026

    ‘ಐ ಲವ್ ಯೂ ಚಿನ್ನು’ ಎಂದು ಮೆಸೇಜ್ ಮಾಡುತ್ತಿದ್ದ ಉಪನ್ಯಾಸಕನ ಗ್ರಹಚಾರ ಬಿಡಿಸಿದ ವಿದ್ಯಾರ್ಥಿನಿಯರು!

    October 30, 2026

    ದರ್ಶನ್ ಹಾಗೂ ಕುಟುಂಬದ ವಿರುದ್ಧ ಮಾತನಾಡದಂತೆ ನಟ ಧನ್ವೀರ್ ಗೆ ಕೋರ್ಟ್ ತಡೆ

    October 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.