ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾರ್ಡ್ ನಂ 15 ಮತ್ತು 16 ರ ಸಂತೇಪೇಟೆಯಲ್ಲಿ ನಿರ್ಮಾಣಗೊಂಡಿರುವ ಸ್ಲಂ ಬೋರ್ಡ್ ಮನೆಗಳ ಕಾಮಗಾರಿ ಅತ್ಯಂತ ಕಳಪೆಯಾಗಿದ್ದು, ಮನೆ ನಿರ್ಮಾಣದಲ್ಲಿ ಅಕ್ರಮ ನಡೆದಿದೆ ಎಂದು ಸ್ಥಳೀಯರು ದೂರಿದ್ದಾರೆ.
ಈ ಸ್ಲಂ ಬೋರ್ಡ್ ಮನೆಗಳು ಮಂಜೂರು ಆಗಿ ನಾಲ್ಕು ವರ್ಷಗಳೂ ಕಳೆದಿದ್ದರೂ, ಇನ್ನೂ ಕಾಮಗಾರಿ ಪೂರ್ಣಗೊಳಿಸದೆ , ಅಕ್ರಮ ಎಸಗಲಾಗಿದೆ ಎಂದು ಸ್ಥಳೀಯರು ಸರ್ಕಾರದ ವಿರುದ್ಧ ತೀವ್ರ ಬೇಸರವನ್ನು ವ್ಯಕ್ತಪಡಿಸಿದ್ದಾರೆ .
ಮನೆಗಳಿಗೆ ದುರ್ಬಲ ತಳಪಾಯ ಹಾಕಲಾಗಿದ್ದು, ಮನೆ ನಿರ್ಮಾಣಕ್ಕೆ ಕಳಪೆ ಇಟ್ಟಿಗೆಗಳನ್ನು ಬಳಸಲಾಗಿದೆ. ಐದು ಇಂಚು ಆರ್ ಸಿ ಸಿ ಹಾಕುವ ಬದಲು ಎರಡುವರೆ ಇಂಚು ಹಾಕಲಾಗಿದೆ. ಇದರಿಂದಾಗಿ ಮೇಲ್ಛಾವಣಿಗಳು ಸೋರಿಕೆಯಾಗುತ್ತಿದೆ. ಹೊಸದಾಗಿ ಗೋಡೆಗಳು ನಿರ್ಮಾಣಗೊಂಡಿದ್ದರೂ ಮನೆ ನಿರ್ಮಾಣ ಪೂರ್ಣಗೊಳ್ಳುವ ಮೊದಲೇ ಗೋಡೆಗಳು ಬಿರುಕು ಬಿಟ್ಟಿದೆ.
ಈ ಸಮಸ್ಯೆಗಳ ಬಗ್ಗೆ ಸ್ಥಳೀಯರು ಸಂಬಂಧಪಟ್ಟ ಸ್ಲಂ ಬೋರ್ಡ್ ಇಲಾಖೆಯ ಅಧಿಕಾರಿಯವರಿಗೆ ವಿಚಾರಿಸಿದರೆ, ಬೇಜಾವ್ದಾರಿತನದಿಂದ ಉತ್ತರ ನೀಡಿ ಕಳುಹಿಸಿದ್ದಾರೆ ಎಂದು ಅಧಿಕಾರಿಗಳ ಮೇಲೆ ಹಿರಿಯೂರು ತಾಲ್ಲೂಕಿನ ಸಾರ್ವಜನಿಕರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಕಳಪೆ ಕಾಮಗಾರಿ ಸಂಬಂಧ ಜಿಲ್ಲಾಧಿಕಾರಿಯ ಗಮನಕ್ಕೆ ತಂದರೂ ಯಾವುದೇ ಕ್ರಮವನ್ನು ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಲಾಗಿದೆ. ಸ್ಥಳೀಯ ಶಾಸಕರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಜನರು ದೂರಿದ್ದಾರೆ. ತಕ್ಷಣವೇ ಈ ಬಗ್ಗೆ ಸರ್ಕಾರ ಕ್ರಮಕೈಗೊಳ್ಳಬೇಕು. ನೊಂದ ಜನರಿಗೆ ನ್ಯಾಯ ಒದಗಿಸಬೇಕು ಎಂದು ಇಲ್ಲಿನ ನಿವಾಸಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ವರದಿ: ಮುರುಳಿಧರನ್ ಆರ್. ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy