ತಿಪಟೂರು: ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿಯ ನೆಲ್ಲಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಗ್ಗಾವೆ ಗ್ರಾಮದ ಕಾಲನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಇದ್ದರೂ ಇಲ್ಲದಂತಾಗಿದ್ದು, ಅವ್ಯವಸ್ಥೆಯಿಂದ ಕೂಡಿದೆ.
ಗಿಡಗಂಟೆಗಳ ಮಧ್ಯೆ ಮುಳುಗಿಹೋಗಿರುವ ಸಮುದಾಯ ಭವನವನ್ನು ಕುಡುಕರು ವಶಪಡಿಸಿಕೊಂಡಿದ್ದಾರೆಯೇ ಏನೋ ಎಂದು ಅನ್ನಿಸುವಷ್ಟು ಮದ್ಯದ ಬಾಟಲಿಗಳು ಇಲ್ಲಿ ರಾಶಿ ಬಿದ್ದಿವೆ. ಈ ಭವನದ ಸುತ್ತ ಮುತ್ತಲಿನ ಪ್ರದೇಶದಲ್ಲಿ ಕೆಲವರು ಶೌಚ ಮಾಡಲು ಬಳಸುತ್ತಿದ್ದಾರೆ. ಇಷ್ಟೆಲ್ಲ ಅವ್ಯವಸ್ಥೆಗಳಿದ್ದರೂ, ಗ್ರಾಮ ಪಂಚಾಯಿತಿ ಪಿಡಿಓ ಮತ್ತು ಅಧ್ಯಕ್ಷರಿಗೆ ಕಾಲನಿಯ ನಿವಾಸಿಗಳು ನೂರು ಬಾರಿ ಮನವಿ ನೀಡಿದರೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಡಾ.ಎನ್.ಮೂರ್ತಿ ಸ್ಥಾಪಿತ) ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಟ್ಟಸ್ವಾಮಿ ಆರೋಪಿಸಿದರು.
ಸ್ಥಳೀಯ ನಿವಾಸಿಗಳಿಗೆ ಮತ್ತು ಅಕ್ಕಪಕ್ಕದ ಜನಸಾಮಾನ್ಯರಿಗೆ ಮದುವೆ ಮುಂತಾದ ಕಾರ್ಯಕ್ರಮಗಳಿಗೆ ಬಳಕೆಯಾಗಲಿ ಎಂದು ಸರಕಾರದ ಹಣವನ್ನು ವೆಚ್ಚ ಮಾಡಿ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಮಾಡಲಾಗಿದೆ ಆದರೆ ಇಲ್ಲಿ ಭವನ ನೋಡಿದರೆ ಎಲ್ಲಾ ಗಿಡಗಂಟೆಗಳಿಂದ ಮುಚ್ಚಿಕೊಂಡು ಹೋಗಿದೆ ಇದು ನೆಪ ಮಾತ್ರಕ್ಕೆ ಭವನದಂತೆ ಕಾಣಿಸುತ್ತಿದೆ. ದಿನನಿತ್ಯ ಪುಂಡ ಪೋಕರಿಗಳು ಬಂದು ಭವನವನ್ನು ಹಾಳು ಮಾಡುತ್ತಿದ್ದಾರೆ ಇನ್ನಾದರೂ ಕೂಡ ಗ್ರಾಮ ಪಂಚಾಯತಿ ಅಧಿಕಾರಿಗಳು ಗಿಡಗಂಟೆಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಿ ದಲಿತ ಸಮುದಾಯಕ್ಕೆ ಕಾರ್ಯಕ್ರಮಗಳಿಗೆ ನೀಡಬೇಕಾಗಿದೆ ಪುಟ್ಟಸ್ವಾಮಿ ಒತ್ತಾಯಿಸಿದ್ದಾರೆ.
ವರದಿ: ಮಂಜು ಗುರುಗದಹಳ್ಳಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700