ಸರಗೂರು: ದಾಸ ಸಾಹಿತ್ಯದ ಮೂಲಕ ಕನಕದಾಸರು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ನೀಡಿದ ಕೊಡುಗೆ ಅಪಾರ ಎಂದು ಪ.ಪಂ. ಅಧ್ಯಕ್ಷ ಶಿವಕುಮಾರ್ ಶ್ಲಾಘಿಸಿದರು.
ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ 538ನೇ ಕನಕದಾಸರ ಜಯಂತಿಯನ್ನು ಶನಿವಾರದಂದು ಪ.ಪಂ. ಅಡಳಿತ ವತಿಯಿಂದ ಕನಕದಾಸರ ಫೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಕುಲ ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆ ಏನಾದರೂ ಬಲ್ಲಿರಾ? ಎಂದು ಹಾಡಿ ಜಾತ್ಯತೀತ ದಾರ್ಶನಿಕರಾಗಿ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಅವರನ್ನು ಕೇವಲ ಒಂದು ಜಾತಿಗೆ ಸೀಮಿತವಾಗಿ ಮಾಡದೇ ಮನುಕುಲದ ಉದ್ಧಾರಕ ಎಂದು ಭಾವಿಸಬೇಕು ಎಂದರು.
ಪಪಂ ಸದಸ್ಯ ಹಾಗೂ ನಾಯಕ ಸಮಾಜದ ತಾಲ್ಲೂಕು ಉಪಾಧ್ಯಕ್ಷ ಶ್ರೀನಿವಾಸ ಮಾತನಾಡಿ, ದಾಸಶ್ರೇಷ್ಠ ಕನಕದಾಸ ಸಮಾಜದಲ್ಲಿನ ಮೂಢ ನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಅನಿಷ್ಟ ಪದ್ಧತಿಗಳ ವಿರು ದ್ದ ಧ್ವನಿ ಎತ್ತಿ, ಸಮಾಜದ ಅಂಕು–ಡೊಂಕುಗಳನ್ನು ತಿದ್ದಿದ ಮಹಾನ್ ದಾರ್ಶನಿಕರು ಎಂದರು.
ಕನಕದಾಸರು ಒಂದು ವರ್ಗದ ಸೀಮಿತವಾಗಿಲ್ಲ. ಅವರು ಕಾವ್ಯ ಹಾಗೂ ಕೀರ್ತನೆಗಳ ಮೂಲಕ ಸಮಾಜದಲ್ಲಿ ಬೇರೂರಿದ್ದ ಕಂದಾಚಾರಗಳನ್ನು ಹೋಗಲಾಡಿಸಲು ಶ್ರಮಿಸಿ, ಸಾಹಿತ್ಯಕ್ಕೆ ತನ್ನದೆ ಆದ ಕೊಡುಗೆ ನೀಡಿ, ಎಲ್ಲರನ್ನು ಸಮಾನ ತೆ ದೃಷ್ಡಿಕೋನದಿಂದ ನೋಡುವಂತೆ ತಿಳಿಸಿ ವಿಶ್ವಮಾನವರಾದರು ಎಂದರು.
ಈ ಸಂದರ್ಭದಲ್ಲಿ ಪ.ಪಂ. ಸದಸ್ಯರು ಚೆಲುವ ಕೃಷ್ಣ, ನೂರಳಾಸ್ವಾಮಿ, ಚೈತ್ರ ಸ್ವಾಮಿ, ಸಣ್ಣ ತಾಯಮ್ಮ, ಮುಖಂಡರು ರಮೇಶ್, ಸ್ವಾಮಿ, ಮುಖ್ಯಾಧಿಕಾರಿ ಎಸ್.ಕೆ.ಸಂತೋಷ ಕುಮಾರ್, ಸಿಬ್ಬಂದಿ ವರ್ಗ ಪಳಿನಿಸ್ವಾಮಿ, ರಾಮು,ಅನಿತಕುಮಾರಿ, ಅರುಣ್ ಆರಾಧ್ಯ, ದಿನೇಶ್, ಪೌರಕಾರ್ಮಿಕರು ಹಾಗೂ ಮುಖಂಡರು ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


