ಬೆಂಗಳೂರು: ರಾಜಕೀಯ ಪಕ್ಷಗಳು ಜಿದ್ದಿಗೆ ಬಿದ್ದಂತೆ ಮತದಾರರ ಓಲೈಕೆಗೆ ಮುಂದಾಗಿದ್ದು, ಹೊಸ ಹೊಸ ಯೋಜನೆ, ಅಭಿಯಾನದ ಮೂಲಕ ಗಮನ ಸೆಳೆಯುತ್ತಿದ್ದಾರೆ.
ಇದೀಗ ಜೆಡಿಎಸ್ ನಾಯಕರು ಮನೆ ಮನೆಗೆ ಕನ್ನಡ ಬಾವುಟ ಅಭಿಯಾನಕ್ಕೆ ಸಜ್ಜಾಗಿದ್ದು, ನವೆಂಬರ್ 1ರಿಂದ ರಾಜ್ಯಾದ್ಯಂತ 15 ದಿನಗಳ ಕಾಲ ಕನ್ನಡ ಬಾವುಟ ಅಭಿಯಾನ ನಡೆಯಲಿದೆ. ರಾಷ್ಟ್ರಪ್ರೇಮದ ಜೊತೆಗೆ ರಾಜ್ಯ ಪ್ರೀತಿ ಸಂದೇಶ ಸಾರುವುದೇ ನಮ್ಮ ಉದ್ದೇಶ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಹರ್ ಘರ್ ತಿರಂಗಾ ಅಭಿಯಾನದ ಮಾದರಿಯಲ್ಲೇ ಮನೆ ಮನೆಗೂ ಕನ್ನಡ ಬಾವುಟ ಅಭಿಯಾನ ಆರಂಭಿಸಲಾಗುತ್ತಿದೆ. ನವೆಂಬರ್. 1 ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಅಂದಿನಿಂದ ನ.15ರವರೆಗೆ ಮನೆ ಮನೆಗೆ ಕನ್ನಡ ಬಾವುಟ ವಿತರಿಸಲಾಗುವುದು ಎಂದು ಹೇಳಿದ್ದಾರೆ.
ಒಂದು ರಾಷ್ಟ್ರ ಒಂದು ಭಾಷೆ ಎಂಬ ನಿಟ್ಟಿನಲ್ಲಿ ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ. ಎಲ್ಲಾ ಭಾಷೆಗಳನ್ನು ನಾಶ ಮಾಡಿ ಒಂದು ಭಾಷೆ ಎಂದು ಮಾಡಲು ಹೊರಟಂತಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ದೇಶಕ್ಕೆ ಮಾರಕವಾಗಿವೆ ಎಂದು ವಾಗ್ದಾಳಿ ನಡೆಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


