ಬೆಳಗಾವಿ: ಹಲಸಿ ಗ್ರಾಮದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟ ಮೂವರು ಆರೋಪಿಗಳನ್ನು ನಂದಗಡ ಪೊಲೀಸರು ಬಂಧಿಸಿದ್ದಾರೆ. ಖಾನಾಪುರದ ಹಲಸಿ ಗ್ರಾಮ ಪಂಚಾಯತ್ ಆವರಣದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಬಳಿಕ ಬಸವಣ್ಣನವರ ಮೂರ್ತಿಗೆ ಕಪ್ಪು ಮಸಿ ಬಳಿದಿದ್ದರು.
ಘಟನೆ ಸಂಬಂಧ ನಂದಗಡ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಸಂಜು ಗುರವ್, ಸಚಿನ್ ಗುರವ್, ಗಣೇಶ ಪಡ್ನೇಕರ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 153A, 295, 427, 120Bರ ಅಡಿಯಲ್ಲಿ ಕೇಸ್ ದಾಖಲಾಗಿದೆ. ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.