ಕನ್ನಡದ ಚೆಲುವೆ ಪೂಜಾ ಹೆಗ್ಡೆ ಸದ್ಯ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಮುಂಬೈನಲ್ಲಿ ನಟಿ ಐಷಾರಾಮಿ ಮನೆಯೊಂದನ್ನು ಖರೀದಿಸಿದ್ದಾರೆ.
ಮುಂಬೈನ ಬಾಂದ್ರಾದಲ್ಲಿ 45 ಕೋಟಿ ರೂ. ಮೌಲ್ಯದ ಮನೆ ಖರೀದಿ ಮಾಡಿದ್ದಾರೆ. ಮನೆಯ ವಿಸ್ತೀರ್ಣ 4000 ಚದರ ಅಡಿ ಎಂದು ಹೇಳಲಾಗ್ತಿದೆ. ಬಾಲಿವುಡ್ ಸ್ಟಾರ್ ನಟಿ- ನಟಿಯರು ವಾಸಿಸುವ ಏರಿಯಾದಲ್ಲಿಯೇ ಮನೆ ಖರೀದಿ ಮಾಡಿದ್ದಾರೆ.
ಟಾಲಿವುಡ್ ನಲ್ಲಿ ರಶ್ಮಿಕಾ, ಶ್ರೀಲೀಲಾ ಹವಾ ಜಾಸ್ತಿ ಆದ್ಮೇಲೆ ಬಾಲಿವುಡ್ ನತ್ತ ನಟಿ ಮುಖ ಮಾಡಿದ್ದರು. ಹಿಂದಿ ಸಿನಿಮಾಗಳಲ್ಲಿ ಅವಕಾಶಗಳು ಅರಸಿ ಬರುತ್ತಿದ್ದಂತೆ ಈಗ ತೆಲುಗಿನಲ್ಲಿಯೂ ನಟಿಗೆ ಕರೆ ಬರುತ್ತಿದೆ. ಶಾಹಿದ್ ಕಪೂರ್ ಜೊತೆ ಹೊಸ ಸಿನಿಮಾ, ಸುನೀಲ್ ಶೆಟ್ಟಿ ಪುತ್ರನಿಗೆ ನಾಯಕಿಯಾಗಿ ಹೊಸ ಪ್ರಾಜೆಕ್ಟ್ ಮಾಡುತ್ತಿದ್ದಾರೆ. ನಾಗಚೈತನ್ಯ ಮುಂಬರುವ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿಯಾಗಿ ಸೆಲೆಕ್ಟ್ ಆಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296