ಪ್ರಪಂಚದಾದ್ಯಂತ ಇರುವ ಕನ್ನಡಿಗರನ್ನು ಒಂದುಗೂಡಿಸುವ ಮಹತ್ವದ ಕಾರ್ಯಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದಲ್ಲಿರುವ ಮೆಲ್ಬರ್ನ್ ನಗರದಲ್ಲಿ ಸ್ಥಾಪಿಸಲಾದ ಕನ್ನಡ ಭವನವನ್ನುಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಇಂದು ಲೋಕಾರ್ಪಣೆ ಮಾಡಿದರು.
ಆಸ್ಟ್ರೇಲಿಯಾದಲ್ಲಿರುವ ಕನ್ನಡಿಗರ ಆಹ್ವಾನ ಮೇರೆಗೆ ಅಲ್ಲಿ ನಡೆಯುತ್ತಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತೆರಳಿದ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಆಸ್ಟ್ರೇಲಿಯಾದ ಮೆಲ್ಬರ್ನ್ ನಗರದಲ್ಲಿ ನೆಲೆ ನಿಂತ ಕನ್ನಡಿಗರು ನಿರ್ಮಾಣ ಮಾಡಿರುವ ಕನ್ನಡ ಭವನವನ್ನು ಇಂದು ಉದ್ಘಾಟನೆ ಮಾಡಿದರು.
ಕನ್ನಡದ ಕಾರ್ಯಚಟುವಟಿಕೆಗಳನ್ನು ವಿದೇಶದಲ್ಲಿಯೂ ವಿಸ್ತರಿಸುತ್ತಿರುವ ಅನಿವಾಸಿ ಕನ್ನಡಿಗರ ಭಾಷಾ ಪ್ರೇಮ ಹಾಗೂ ನಾಡು ನುಡಿಯ ಮೇಲಿರುವ ಅಭಿಮಾನ ಈ ಕನ್ನಡ ಭವನವನ್ನು ನೋಡಿದಾಗ ಅರ್ಥವಾಗುತ್ತದೆ. ಕನ್ನಡ ಸಾಹಿತ್ಯ ಪರಿಷತ್ತು ವಿದೇಶದಲ್ಲಿ ಇರುವ ಕನ್ನಡ ಸಂಘಗಳನ್ನು ಪರಿಷತ್ತಿನ ಅಮಗ ಸಂಸ್ಥೆಯನ್ನಾಗಿಸಿಕೊಂಡು ವಿದೇಶದಲ್ಲಿಯೂ ಕನ್ನಡ ಕಟ್ಟುವ ಕಾಯಕಲ್ಪದಲ್ಲಿ ತೊಡಗಿಕೊಳ್ಳಲಿದೆ. ರಾಜ್ಯದಲ್ಲಿ ಅನಿವಾಸಿ ಕನ್ನಡಿಗರ ಪ್ರತಿನಿಧಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು ಕೆಲಸ ಮಾಡಲಿದೆ ಎನ್ನುವ ಮಾತನ್ನು ಈ ಸಂದರ್ಭದಲ್ಲಿ ಮೆಲ್ಲೋರ್ನ್ ಕನ್ನಡ ಭವನವನ್ನು ಉದ್ಘಾಟಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದರು.
ಕನ್ನಡ ಸಾಹಿತ್ಯ ಸಂಸ್ಕೃತಿ, ಕಲೆ ಜನಪದ ಮುಂದಿನ ಮಂದಿನ ಪೀಳಿಗೆಗೆ ತಿಳಿಸುವ ಹಿನ್ನೆಲೆಯಲ್ಲಿ ಕನ್ನಡ ಭವನದ ಕಾರ್ಯಪ್ರವೃತ್ತವಾಗಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮೆಲ್ಬರ್ನ್ ಫೆಡರಲ್ ಮೆಂಬರ್ ಕ್ಯಾಸೆಂಡ್ರಾ ಫರ್ನಾಡೋ, ಆಸ್ಟ್ರೇಲಿಯಾದ ಗೃಹ ಮತ್ತು ನಗರಾಭಿವೃದ್ಧಿ ಸಚಿವರಾದ ಕಾಲಿನ್ ಬ್ರೂಕ್ಸ್, ಮೆಲ್ಯೂರ್ನ್ ಕನ್ನಡ ಸಂಘದ ಉಪಾಧ್ಯಕ್ಷರಾದ ಶ್ರೀ ಗಂಗಾಧರ ಬೇವಿನಕೊಪ್ಪ, ಕಾರ್ಯದರ್ಶಿ ಶ್ರೀ ಶ್ರೀನಿವಾಸ್ ಶರ್ಮಾ ಹಾಗೂ ಮೆಲ್ಬರ್ನ್ ಕನ್ನಡ ಸಂಘದ ಸದಸ್ಯರು ಮತ್ತು ಆಸ್ಟ್ರೇಲಿಯಾದಲ್ಲಿ ಇರುವ ಕನ್ನಡಿಗರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA