ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕನ್ನಡ ಹಿರಿಯ ಸಾಹಿತಿ ಮಲೆಯೂರು ಗುರುಸ್ವಾಮಿ ವಿಧಿವಶರಾಗಿದ್ದಾರೆ. ಕ್ಯಾನರ್ ನಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಫಲಿಸದೇ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
5ಕ್ಕೂ ಹೆಚ್ಚು ಕಾದಂಬರಿ ರಚನೆ. 10ಕ್ಕೂ ಹೆಚ್ಚು ಕೃತಿಗಳನ್ನು ಸಂಪಾದಿಸಿದ್ದ ಗುರುಸ್ವಾಮಿ, ಮಹಾಕವಿ ಷಡಕ್ಷರಿ ದೇವ ಸ್ಮಾರಕ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಪಡೆದಿದ್ರು. ನಾಳೆ ಸ್ವಗೃಹ ಮಲೆಯೂರಿನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ.
ಮಲೆಯೂರು ಗುರುಸ್ವಾಮಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ನಿಕಟಪೂರ್ವ ರಾಜ್ಯಾಧ್ಯಕ್ಷರಾಗಿದ್ದರು.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೈಸೂರು ಜೆ.ಎಸ್.ಎಸ್. ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೈಸೂರು ಜೆ.ಎಸ್.ಎಸ್. ಮಹಾವಿದ್ಯಾಪೀಠದ ಬಳಿ ಇಂದು ಬೆಳಿಗ್ಗೆ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಅವರ ಹುಟ್ಟೂರಾದ ಚಾಮರಾಜನಗರ ತಾಲ್ಲೂಕಿನ ಮಲೆಯೂರಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA