ತುಮಕೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಹಾವೇರಿ ಜಿಲ್ಲೆ ಗೋಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹಯೋಗದಲ್ಲಿ “ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು” ಕುರಿತು 3 ದಿನಗಳ ಕಮ್ಮಟವನ್ನು ಹಮ್ಮಿಕೊಂಡಿದ್ದು, ಕಮ್ಮಟದಲ್ಲಿ ಭಾಗವಹಿಸಲಿಚ್ಛಿಸುವವರಿಂದ ಅರ್ಜಿ ಆಹ್ವಾನಿಸಿದೆ.
ಗೋಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಅಕ್ಟೋಬರ್ ಕೊನೆಯ ವಾರದಲ್ಲಿ ಕಮ್ಮಟವನ್ನು ನಡೆಸಲು ಉದ್ದೇಶಿಸಿದ್ದು, ಆಸಕ್ತ 20 ರಿಂದ 45 ವರ್ಷದೊಳಗಿನ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 8 ಕಡೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಜಾಲತಾಣ http://karnatakasahithyaacademy.org ಅನ್ನು ವೀಕ್ಷಿಸಬಹುದಾಗಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ಎನ್. ಕರಿಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q