ತುಮಕೂರು: ನಾಗರಿಕ ಹಿತರಕ್ಷಣಾ ಸಮಿತಿ ವತಿಯಿಂದ ಡಿಸೆಂಬರ್ 26ರಂದು ವೈಭವದ ಕನ್ನಡ ರಾಜ್ಯೋತ್ಸವ ಮತ್ತು ಪುನೀತ್ ರಾಜ್ ಕುಮಾರ್ ನುಡಿನಮನ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವು ಬೆಳಗ್ಗೆ 9:30ಕ್ಕೆ ಇಲ್ಲಿನ ಸರಸ್ವತಿ ಪುರಂನ ವಾಯು ವಿಹಾರ ಕೇಂದ್ರ, ಯೋಗ ಮಂದಿರದಲ್ಲಿ ನಡೆಯಲಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕರಾದ ಜ್ಯೋತಿ ಗಣೇಶ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ವಾಡ್ ಅವರು ಭಾಗವಹಿಸಲಿದ್ದಾರೆ.
ಪುನೀತ್ ರಾಜ್ ಕುಮಾರ್ ನುಡಿನಮನ ಕಾರ್ಯಕ್ರಮವನ್ನು ಸಂತಶಿಶುನಾಳ ಶರೀಫ ಪ್ರಚಾರಕ ಡಾ.ಎಂ.ಸಿ.ನರಸಿಂಹಮೂರ್ತಿ ಅವರು ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಗರಿಕ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಬಿ.ದೇವರಾಜು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy