ಕೆ.ಆರ್.ಪೇಟೆ: ಕೆ.ಆರ್ ಪೇಟೆ ತಾಲೂಕು ಹಕ್ಕಿ ಹೆಬ್ಬಾಳು ಹೋಬಳಿಯ ಹೊಸ ದಡದಹಳ್ಳಿಯಲ್ಲಿ ಗ್ರಾಮ ದೇವತೆ ಶ್ರೀ ಲಕ್ಷ್ಮೀದೇವಿ ಯುವಕರ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಸಂಘದ ಉದ್ಘಾಟನೆ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮದಲ್ಲಿ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಲಾಯಿತು. ಸಂಜೆ ಭದ್ರಾವತಿ ಮೆಲೋಡಿಸ್ ಅವರಿಂದ ವಿಶೇಷ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಮುಖಂಡರು, ಪದಾಧಿಕಾರಿಗಳು , ಗ್ರಾಮದ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ವರದಿ: ಮಂಜು, ಶ್ರವಣೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz