ತಿಪಟೂರು: ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆ ಇಂದು ನಡೆಯುತ್ತಿದ್ದು, ಇಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ರವರೆಗೆ ನಡೆಯಲಿದೆ. ಜಿಲ್ಲಾ ಅಧ್ಯಕ್ಷರ ಸ್ಥಾನಕ್ಕೆ ಆರು ಮಂದಿ ಮತ್ತು ರಾಜ್ಯಾಧ್ಯಕ್ಷರ ಸ್ಥಾನಕ್ಕೆ 21 ಮಂದಿ ಸ್ಪರ್ಧಿಸಲಿದ್ದಾರೆ.
ಜಿಲ್ಲಾ ಅಧ್ಯಕ್ಷರ ಸ್ಥಾನದ ಮತಪತ್ರ ಗುಲಾಬಿ ಬಣ್ಣ ಮತ್ತು ರಾಜ್ಯಾಧ್ಯಕ್ಷರ ಸ್ಥಾನದ ಬಿಳಿ ಬಣ್ಣದ ಮತಪತ್ರವಾಗಿದೆ. ಕರ್ನಾಟಕ ಸಾಹಿತ್ಯ ಪರಿಷತ್ತು ಚುನಾಯಿತ ಅಭ್ಯರ್ಥಿಗಳು ರಾಜ್ಯಾಧ್ಯಕ್ಷರ ಆಯ್ಕೆ ಮಾಡಲಿದ್ದಾರೆ. ಇಂದು ಸಂಜೆ 6 ಗಂಟೆಯ ಒಳಗಡೆ ಚುನಾಯಿತ ಅಭ್ಯರ್ಥಿಗಳ ಗೆಲುವಿನ ಮತ ಎಣಿಕೆ ನಡೆಯುತ್ತದೆ ಎಂದು ಕರ್ನಾಟಕ ಸಾಹಿತ್ಯ ಪರಿಷತ್ ಚುನಾವಣಾ ಅಧಿಕಾರಿ ತಿಳಿಸಿದ್ದಾರೆ
ಇಂದು ಬೆಳಗ್ಗೆ 8 ಗಂಟೆಯಿಂದಲೇ ತಿಪಟೂರಿನಲ್ಲಿ ಸಹ ಮತಗಟ್ಟೆಗಳ ಮುಂದೆ ಮತದಾರರು ಮತ ಹಾಕಲು ಬರುತ್ತಿದ್ದಾರೆ. ಇಂದು ಸಂಜೆಯೊಳಗೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ವರದಿ: ಮಂಜು ಗುರಗದಹಳ್ಳಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700