ಹಾವೇರಿ : ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ರಾಜ್ಯ ಸರ್ಕಾರ 20 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸುನಿಲ್ ಕುಮಾರ್ ಮಾತನಾಡಿ , ಹಾವೇರಿಯಲ್ಲಿ ಅದ್ಧೂರಿಯಾಗಿ ಅರ್ಥಪೂರ್ಣವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸರ್ಕಾರದ ಅನುದಾನಕ್ಕೆ ಯಾವುದೇ ಕೊರತೆಗಳು ಆಗುವುದಿಲ್ಲ. ಮುಖ್ಯಮಂತ್ರಿ ಬೊಮ್ಮಾಯಿ ಅವರು 20 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದಾರೆ, ಈ ಕಾರ್ಯಕ್ರಮಕ್ಕೆ ಮತ್ತು ಇದರ ಪೂರ್ವ ತಯಾರಿಯ ಬಗ್ಗೆ ಚರ್ಚಿಸುವಂತೆ, ಇದಕ್ಕೆ ಬೇಕಾದ ಕಾಮಗಾರಿ ತಕ್ಷಣವೇ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ, ಅಚ್ಚುಕಟ್ಟಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಸಚಿವ ಹೇಳಿದ್ದಾರೆ.
ಜನವರಿ 6ರಂದು ಅದ್ದೂರಿ ಮೆರವಣಿಗೆ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ. ಐದು ಸಾವಿರಕ್ಕೂ ಹೆಚ್ಚು ಸ್ವಯಂ ಸೇವಕರನ್ನು ಬಳಸಿಕೊಂಡು ಅಚ್ಚುಕಟ್ಟಾಗಿ ಸಮ್ಮೇಳನ ನಡೆಸಲಾಗುತ್ತದೆ, ಇದಕ್ಕಾಗಿ ಸರ್ಕಾರ ಬಜೆಟ್ ನಲ್ಲಿ 20 ಕೋಟಿ ಮೀಸಲಿಟ್ಟಿತ್ತು, ಅಂತೆಯೇ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz