ತುಮಕೂರು: ಹನಿ ನಿಧಿ ಸಾಹಿತ್ಯ ಸಾಂಸ್ಕೃತಿಕ ಕಲಾ ಟ್ರಸ್ಟ್(ರಿ) ಹನಿ ನಿಧಿ ಪ್ರಕಾಶನ ಹಾಗೂ ಶ್ರೀಗಂಧ ಸಾಹಿತ್ಯ ಸಾಂಸ್ಕೃತಿಕ ಕಲಾ ಬಳಗ ತುಮಕೂರು ರಾಜ್ಯ ಕರ್ನಾಟಕ ಇದರ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ, ರಾಜ್ಯದ ಮಟ್ಟದ ಕವಿಗೋಷ್ಠಿ ಮತ್ತು ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ, ಪುಸ್ತಕ ಬಿಡುಗಡೆ ಹಾಗೂ ಸಾಹಿತ್ಯ ನಿಧಿ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ತುಮಕೂರಿನ ಕನ್ನಡ ಭವನದಲ್ಲಿ ಜೂನ್ 29ರಂದು ನಡೆಯಲಿದೆ.
ಕವಿಗೋಷ್ಠಿಯಲ್ಲಿ ಭಾಗವಹಿಸುವವರು ಮತ್ತು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಹೆಚ್ಚಿನ ಮಾಹಿತಿಗಳಿಗಾಗಿ 7483146697 ಸಂಪರ್ಕಿಸಬಹುದಾಗಿದೆ. ಅರ್ಜಿಸಲ್ಲಿಸಲು 15—06—2025 ಕೊನೆಯ ದಿನಾಂಕವಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷ, ಸಂಪಾದಕ ಹನಿನಿಧಿ ಸಾಹಿತ್ಯ ಸಾಂಸ್ಕೃತಿಕ ಕಲಾ ಟ್ರಸ್ಟ್ ಅಂಜನ್ ಕುಮಾರ್ ಪಿ.ಆರ್., ರಾಜ್ಯಾಧ್ಯಕ್ಷರಾದ ಭರತ್ ಕೆ.ಆರ್., ನಿರ್ದೇಶಕರಾದ ಡಾ.ಮಲ್ಲೇಕಾವು ಮುಕುಂದರಾಜು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW