ತುಮಕೂರು: ಕನ್ನಡ ಸಾಹಿತ್ಯ ಸಮ್ಮೇಳನಗಳು ಕರುನಾಡ ಬೆಳವಣಿಗೆಗೆ ದಿಕ್ಸೂಚಿಯಾಗಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಶಯ ಚಿಂತನೆಗಳು ಜಿಲ್ಲೆಗೆ ಮಾರ್ಗದರ್ಶಿಯಾಗಲಿ ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಆಶಿಸಿದರು.
ಸೋಮವಾರ ನಗರದ ಗಾಜಿನಮನೆ ಆವರಣದಲ್ಲಿ 17ನೇ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ರಾಜ್ಯ ಮಟ್ಟದ ಸಾಹಿತ್ಯ ಸಮ್ಮೇಳನಗಳಲ್ಲಿ ರಾಜ್ಯದ ಆಡಳಿತ, ಅಭಿವೃದ್ಧಿ ಹಾಗೂ ಸಮಾಜಕ್ಕೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳು ಚರ್ಚೆಗಳಾಗಿ, ಸರ್ಕಾರಗಳಿಗೆ ಪರಿಣಾಮಕಾರಿ ಸಲಹೆ–ಸೂಚನೆಗಳನ್ನು ನೀಡಿದ ಇತಿಹಾಸವಿದೆ. ಈ ಸಲಹೆ ಸೂಚನೆಗಳಿಗೆ ಸರ್ಕಾರ ಎಷ್ಟರ ಮಟ್ಟಿಗೆ ಮನ್ನಣೆ ನೀಡಿದೆ ಎಂಬ ಚರ್ಚೆಗಳ ನಡುವೆಯೂ ಕನ್ನಡ ನಾಡಿನ ಬೆಳವಣಿಗೆ ಕನ್ನಡಿಗರಿಂದಲೇ ಆಗಬೇಕು ಎಂದು ಕರೆ ಕೊಟ್ಟರು.
ತುಮಕೂರಿನಲ್ಲಿ ಕಲಾಗ್ರಾಮ: ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಘೋಷಣೆ 1915ರಲ್ಲಿ ಸ್ಥಾಪನೆಯಾದ ಕನ್ನಡ ಸಾಹಿತ್ಯ ಪರಿಷತ್ ಶತಮಾನದ ಕಾಲದಿಂದ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸೇವೆಯಲ್ಲಿ ತೊಡಗಿಸಿಕೊಂಡು ಬಂದಿದೆ. ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ 1966ರಲ್ಲಿ ಆರಂಭಗೊಂಡು 60 ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.
ಹಿಂದಿ ಹೇರಿಕೆ ಕಳವಳಕಾರಿ: ಹಿಂದಿ ಭಾಷೆಯನ್ನು ಕೇಂದ್ರ ಸರ್ಕಾರ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಪ್ರಾದೇಶಿಕ ಭಾಷೆಗಳ ಮೇಲೆ ಹೇರುತ್ತಿರುವುದು ಕಳವಳಕಾರಿಯಾಗಿದೆ. ಹಿಂದಿ ಒಂದು ಆಕ್ರಮಣಕಾರಿ ಭಾಷೆಯಾಗಿದ್ದು, ಹೇರಿಕೆ ಮನೋಭಾವ ಭಾರತದ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ನಿಲುವು ಎಂದು ಡಾ. ಕರೀಗೌಡ ಬೀಚನಹಳ್ಳಿ ಪ್ರತಿಪಾದಿಸಿದರು.
ಬಹ್ರೇನ್ ಕನ್ನಡ ಸಂಘಕ್ಕೆ 1 ಕೋಟಿ ನೆರವು: ಕನ್ನಡ ಭಾಷೆಗೆ ಈಗಾಗಲೇ 8 ಜ್ಞಾನಪೀಠ ಪ್ರಶಸ್ತಿಗಳು ಲಭಿಸಿರುವುದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ. ಬಹ್ರೇನ್ ಕನ್ನಡ ಸಂಘದ ಕಾರ್ಯಚಟುವಟಿಕೆಗೆ ವೈಯಕ್ತಿಕವಾಗಿ 1 ಕೋಟಿ ದೇಣಿಗೆ ನೀಡಲಾಗಿದೆ ಎಂದು ಸಚಿವ ಪರಮೇಶ್ವರ್ ಭರವಸೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


