ಪಾವಗಡ : ಕನ್ನಡ ಸಾಹಿತ್ಯಕ್ಕೆ ಹಲವು ಪ್ರಥಮಗಳ ಕೀರ್ತಿ ತಂದು ಕೊಟ್ಟ ಕವಿ ರಾಷ್ಟಕವಿ ಕುವೆಂಪು ರವರು ಎಂದು ಗಡಿನಾಡು ಕನ್ನಡ ಜಾಗೃತಿ ವೇದಿಕೆಯ ಅಧ್ಯಕ್ಷ ಪಿ.ಹರಿಕೃಷ್ಣ ತಿಳಿಸಿದರು.
ಪೋತಗಾನಹಳ್ಳಿಯ ಕುವೆಂಪು ವೃತ್ತದಲ್ಲಿ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜ್ಞಾನಪೀಠ, ಪಂಪ ಪ್ರಶಸ್ತಿಗಳು ಸೇರಿದಂತೆ ಹಲವು ಪ್ರಥಮಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ದೊರಕಿಸಿಕೊಟ್ಟ ಕೀರ್ತಿ ಕುವೆಂಪು ರವರದ್ದು. ಆಡುಮುಟ್ಟದ ಸೊಪ್ಪಿಲ್ಲ ಕುವೆಂಪು ಬರೆಯದ ಸಾಹಿತ್ಯ ಬಗೆ ಇಲ್ಲ ಎಂಬಂತೆ ಎಲ್ಲಾ ವಿಧಧ ಕನ್ನಡ ಸಾಹಿತ್ಯವನ್ನು ಬರೆದಿದ್ದಾರೆ.
ತಮ್ಮ ಸಾಹಿತ್ಯದಲ್ಲಿ ವೈಚಾರಿಕತೆಗೆ ಹೆಚ್ಚು ಒತ್ತು ನೀಡಿದ್ದಾರೆ. ಜಗತ್ತಿಗೆ ವಿಶ್ವಮಾನವ ಸಂದೇಶವನ್ನು ನೀಡಿದ್ದಾರೆ. ಹಾಗಾಗಿಯೇ ಅವರ ಜನ್ಮ ದಿನವನ್ನು ವಿಶ್ವಮಾನವ ದಿನವನ್ನಾಗಿ ಆಚರಿಸಲಾಗುತ್ತಿದೆ. ಅಂತಹ ಕವಿಗಳನ್ನು ಪಡೆದ ಕನ್ನಡಿಗರಾದ ನಾವೇ ಧನ್ಯರು ಎಂದು ತಿಳಿಸಿದರು.
ವೃತ್ತದಲ್ಲಿರುವ ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಾಡಗೀತೆಯ ಮೂಲಕ ಗೌರವ ಸಲ್ಲಿಸಲಾಯಿತು. ಕಸಾಪ ಹೋಬಳಿ ಘಟಕದ ಅಧ್ಯಕ್ಷ ಹೊ.ಮ.ನಾಗರಾಜು, ಕಾರ್ಯದರ್ಶಿ ಚಂದ್ರಶೇಖರ್ ಮುದ್ರಾಡಿ, ಮುಖ್ಯಶಿಕ್ಷಕರಾದ ರಾಮಾಂಜಿನೇಯ ಮತ್ತು ಗಿರಿಜಮ್ಮ, ಶಿಕ್ಷಕರಾದ ಅಶೋಕ, ವೆಂಕಟೇಶ್ ಸೇರಿದಂತೆ ಎಲ್ಲಾ ಶಿಕ್ಷಕರು, ಆಶಾ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
ವರದಿ: ನಂದೀಶ್ ನಾಯ್ಕ್, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy