ಕನ್ನಡ ಚಿತ್ರರಂಗದ ಹಿರಿಯ ನಟ, ‘ಕಲಾ ತಪಸ್ವಿ’ ರಾಜೇಶ್(Kalatapasvi Rajesh) ಶನಿವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಇಂದು ಮುಂಜಾನೆ 2.30ಕ್ಕೆ ರಾಜೇಶ್ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. 89 ವರ್ಷದ ಹಿರಿಯ ನಟ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ.
ಇಂದು ಸಂಜೆ 6 ಗಂಟೆವರೆಗೂ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ರಾಜೇಶ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಟ ರಾಜೇಶ್(Kannada senior actor Rajesh) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB