ಬಿಗ್ ಬಾಸ್ ಎಂಬ ಕಾರ್ಯಕ್ರಮ ನಡೆಸುವ ಕೆಲವು ಕನ್ನಡ ದ್ರೋಹಿಗಳ ನಿಮ್ಮ ಕಿತ್ತೋದ್ ಆಟಕ್ಕೆ ಕಿಚ್ಚ ಸುದೀಪ್ ಬಿಗ್ ಬಾಸ್ ನಿರೂಪಕರಾಗಿ ನಿಲ್ಲಿಸಬೇಕಾಗಿದೆ ಎಂದು ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಬಿಗ್ ಬಾಸ್ ಶೋ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಿಚ್ಚ ಸುದೀಪ್ ಅವರನ್ನು ಶೋದಿಂದ ಕೈಬಿಡುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ಸುದೀಪ್ ಅವರಿಗೆ ಮಾಡಿರುವ ಅವಮಾನ ಸಹಿಸೋಲ್ಲ ಎಂದಿದ್ದಾರೆ.
ಎ ಮುಂಬೈ ಮರಾಠಿ ಹಾಗೂ ತಮಿಳ್ ನಿರ್ದೇಶಕ ಮೊದಲು ಬಿಗ್ ಬಾಸ್ ಬಿಡಿ. ಇಲ್ಲ ಬಿಗ್ ಬಾಸ್ ನಿಲ್ಲಬೇಕು. ಅಸಲಿ ವಿಷಯ ನಾಳೆ ಮಾತಾಡ್ತೀನಿ ಎಂದು ಬರೆದು ಚಕ್ರವರ್ತಿ ಚಂದ್ರಚೂಡ್ ಅವರನ್ನು ಟ್ಯಾಗ್ ಮಾಡಿದ್ದಾರೆ.
ರೂಪೇಶ್ ರಾಜಣ್ಣ ಅವರ ಈ ಟ್ವೀಟ್ ಸಖತ್ ಚರ್ಚೆಗೆ ಕಾರಣ ಮಾಡಿಕೊಟ್ಟಿದೆ. ಅಷ್ಟಕ್ಕೂ ರೂಪೇಶ್ ರಾಜಣ್ಣ ಅವರಿಗೆ ಗೊತ್ತಿರೋ ವಿಚಾರ ಏನು? ಅವರು ಏನು ಹೇಳೋಕೆ ಹೊರಟಿದ್ದಾರೆ ಎಂದು ತಿಳಿಯಲು ಜನರಲ್ಲಿಯೂ ಕುತೂಹಲ ಮೂಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296