ಬೆಂಗಳೂರು: ಪರಸ್ಪರ ನಿಂದನೆ ಮಾಡಿಕೊಂಡು ಕನ್ನಡ ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ. ಎಂಇಎಸ್ ನಿಷೇಧಿಸಬೇಕೆಂದು ಒತ್ತಾಯಿಸಿ ಕರೆ ಕೊಟ್ಟಿರುವ ಡಿ.31ರ ಕರ್ನಾಟಕ ಬಂದ್ ಗೆ ಬೆಂಬಲ ನೀಡುವ ಮೂಲಕ ಕನ್ನಡಿಗ ಶಕ್ತಿ ಪ್ರದರ್ಶನಕ್ಕೆ ಮುಂದಾಗಿ ಎಂದು ವಾಟಾಳ್ ನಾಗರಾಜ್ ಮನವಿ ಮಾಡಿಕೊಂಡಿದ್ದಾರೆ.
ಎಂಇಎಸ್ ನಿಷೇಧಿಸಬೇಕೆಂದು ಕರೆ ಕೊಟ್ಟಿರುವ ಕರ್ನಾಟಕ ಬಂದ್ ಗೆ ಬೆಂಬಲಿಸುವಂತೆ ಆಗ್ರಹಿಸಿ ಕನ್ನಡ ಒಕ್ಕೂಟದ ಮುಖಂಡರಾದ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾದ ಸಾ.ರಾ.ಗೋವಿಂದ್, ಕನ್ನಡ ಸೇನೆ ಕೆ.ಆರ್.ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಶಿವರಾಮೇಗೌಡ, ಪ್ರವೀಣ್‍ಶೆಟ್ಟಿ ನೇತೃತ್ವದಲ್ಲಿ ಮಲ್ಲೇಶ್ವರಂ ವೃತ್ತದಲ್ಲಿ ಉರುಳುಸೇವೆ ಹಾಗೂ ಗೊರಗುಂಟೆಪಾಳ್ಯ ಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಮಾಡಿ ಪ್ರತಿಭಟನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.
ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಎಂಇಎಸ್ ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ಕನ್ನಡ ಧ್ವಜ ಸುಟ್ಟು ಅಪಮಾನ ಮಾಡಿದ್ದಾರೆ. ಬಸವಣ್ಣನ ಪ್ರತಿಮೆಗೆ ಮಸಿ ಹಚ್ಚಿದ್ದಾರೆ. ಸರ್ಕಾರದ ವಾಹನಗಳಿಗೆ ಬೆಂಕಿ ಹಚ್ಚಿ ಸರ್ಕಾರದ ಮೇಲೆ ದಾಳಿ ನಡೆಸಿದ್ದಾರೆ. ಈ ಎಲ್ಲವನ್ನೂ ನಾವು ಸಹಿಸಿಕೊಂಡಿರಬೇಕೆ? ಎಂದು ಅವರು ಪ್ರಶ್ನಿಸಿದರು.
ನಮ್ಮೊಳಗೆ ನಾವು ಪರಸ್ಪರ ವೈಯಕ್ತಿಕ ನಿಂದನೆಗಳನ್ನು ಮಾಡಿಕೊಳ್ಳಬಾರದು. ಎಲ್ಲರೂ ಒಂದಾಗಿ ಬಂದ್ ಗೆ ಬೆಂಬಲ ನೀಡಬೇಕು ಎಂದು ಹೇಳಿದರು. ಯಾವ ನೈತಿಕ ಬೆಂಬಲದ ಅಗತ್ಯ ನಮಗಿಲ್ಲ. ಎಲ್ಲರೂ ಭೌತಿಕವಾಗಿಯೇ ಬೆಂಬಲ ನೀಡಬೇಕು. ಈಗಾಗಲೇ ಮಾಲ್ ಗಳು, ಆಟೋ-ಟ್ಯಾಕ್ಸಿ, ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಸೇರಿದಂತೆ ನೂರಾರು ಸಂಘಟನೆಗಳವರು ಬಂದ್‍ಗೆ ಬೆಂಬಲ ನೀಡಿದ್ದಾರೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy