ಬಾಗಲಕೋಟೆ: ಕನ್ನಡದ ಕಬೀರ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಎನ್ ಸುತಾರ್ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರ ಪಟ್ಟಣದಲ್ಲಿ ಇಂದು ಬೆಳಗ್ಗೆ 6:30ಕ್ಕೆ ಇಬ್ರಾಹಿಂ ಸುತಾರ್ ಇಹಲೋಕ ತ್ಯಜಿಸಿದ್ದಾರೆ.
ಅವರಿಗೆ 76 ವರ್ಷ ವಯಸ್ಸಾಗಿತ್ತು.
ಕಳೆದ 3-4 ದಿನಗಳಿಂದ ಇಬ್ರಾಹಿಂ ಸುತಾರ್ ಹೃದಯದ ನೋವಿಗೆ ಚಿಕಿತ್ಸೆ ಪಡೆದಿದ್ದರು. ಇಂದು ಬೆಳಿಗ್ಗೆ ಮತ್ತೆ ಲಘು ಹೃದಯಾಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ಇಬ್ರಾಹಿಂ ಸುತಾರ್ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಇಬ್ರಾಹಿಂ ಸುತಾರ್ ಕೊನೆಯುಸಿರೆಳೆದಿದ್ದಾರೆ.
ಸುತಾರ್ ಅವರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಮುಖ್ಯಮಂತ್ರಿ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.
ಇಬ್ರಾಹಿಂ ಸುತಾರ್ ವೈದಿಕ, ವಚನ ಹಾಗೂ ಸೂಫಿ ಪರಂಪರೆ ಆಶಯಗಳ ಹದ ಪಾಕವನ್ನು ಭಜನೆ, ಪ್ರವಚನ, ಸಂವಾದಗಳ ಮೂಲಕ ಉಣಬಡಿಸಿ ಹಿಂದೂ–ಮುಸ್ಲಿಮರ ನಡುವೆ ಭಾವೈಕ್ಯತೆಯ ಕಂಪು ಪಸರಿಸಿದ್ದ ಕೃಷ್ಣೆಯ ನಾಡಿನ ಕಬೀರ ಆಗಿದ್ದರು. ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪುರಸ್ಕೃತರು . ಅವರು “ಕನ್ನಡದ ಕಬೀರ” ಎಂದು ಅಡ್ಡಹೆಸರು ಹೊಂದಿದ್ದಾರೆ. ಅವರು 1995 ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, 2018 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದಿದ್ದಾರೆ.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB