ಆದಿ ಕವಿ ಅಮೋಘವರ್ಷ ನೃಪತುಂಗರಿಂದ ಆರಂಭವಾಗಿ, ರನ್ನ,ಪಂಪರಿಂದ ಹಿಡಿದು, 8 ಜನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರನ್ನು ಹೊಂದಿರುವ ದೇಶದ ಏಕೈಕ ಭಾಷೆ ನಮ್ಮ ಕನ್ನಡ ಎಂಬುದು ನಮಗೆ ಹೆಮ್ಮೆಯ ವಿಷಯ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.
ಹಾವೇರಿಯಲ್ಲಿ86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಇದಕ್ಕೆ ಆಪತ್ತು ತರುವ ಯಾವುದೇ ಶಕ್ತಿ ವಿಶ್ವದಲ್ಲಿ ಇನ್ನೂ ಹುಟ್ಟಿಲ್ಲ ಮತ್ತು ಹುಟ್ಟುವುದೂ ಇಲ್ಲ ಎಂದರು.
ಕನ್ನಡಕ್ಕೆ ಮಾತ್ರ ಎಂಟು ಜ್ಞಾನಪೀಠ ಪ್ರಶಸ್ತಿಗಳು ದೊರೆತಿವೆ. ದೇಶದ ಬೇರೆ ಯಾವ ಭಾಷೆಗೂ ಸಹ ಇಷ್ಟು ಜ್ಞಾನಪೀಠ ಪ್ರಶಸ್ತಿಗಳು ದೊರೆತಿಲ್ಲ. ಒಂದು ಭಾಷೆ ಒಂದು ಸಂಸ್ಕೃತಿ ಬೆಳೆಯಬೇಕಂದರೇ ಇದುವರೆಗೆ ನಡೆದ ಬಂದ ದಾರಿಯ ಸಿಂಹಾವಲೋಕನ ಮಾಡಬೇಕಾಗುತ್ತದೆ. ಆಗ ಅದು ಮುಂದಿನ ದಾರಿಯನ್ನು ನಿರ್ಧರಿಸುತ್ತದೆ ಎಂದು ಅವರು ಹೇಳಿದರು.
ಆದಿ ಕವಿ ಅಮೋಘವರ್ಷ ನೃಪತುಂಗರಿಂದ ಆರಂಭವಾಗಿ, ರನ್ನ,ಪಂಪರಿಂದ ಹಿಡಿದು, 8 ಜನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರನ್ನು ಹೊಂದಿರುವ ದೇಶದ ಏಕೈಕ ಭಾಷೆ ನಮ್ಮ ಕನ್ನಡ ಎಂಬುದು ನಮಗೆ ಹೆಮ್ಮೆಯ ವಿಷಯವಾಗಿದೆ. ಇದು ಕನ್ನಡ ಸಾಹಿತ್ಯದ ಆತ್ಮಶಕ್ತಿಯನ್ನು ತೋರಿಸುತ್ತದೆ.
1/2 pic.twitter.com/HySqegKhFr— Basavaraj S Bommai (@BSBommai) January 6, 2023
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


