ರಾಜ್ಯದ ಕೃಷ್ಣ ಹೆಗಡೆ ಹಾಗೂ ಕಮಲಾ ದಂಪತಿಯ ಪುತ್ರಿ ಡಾ.ಶೃತಿ ಹೆಗಡೆ ಅವರು ಅಮೇರಿಕದಲ್ಲಿ ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದಾರೆ.
ಹುಬ್ಬಳ್ಳಿಯಲ್ಲಿ ನೆಲೆಸಿದ್ದ ಇವರು ಶಿರಸಿ ತಾಲೂಕಿನ ಮುಂಡಿಗೆಸರ ಅಜ್ಜೊರಮನೆ ಕುಟುಂಬದವರು ಎಂದು ತಿಳಿದುಬಂದಿದೆ. ಶೃತಿ ಅವರು 2018ರಲ್ಲಿಯೂ ಮಿಸ್ ಕರ್ನಾಟಕ ರನ್ನರ್ ಅಪ್ ಹಾಗೂ ಮಿಸ್ ಸೌತ್ ಇಂಡಿಯಾ ವಿಜೇತೆಯಾಗಿಯೂ ಗುರುತಿಸಿಕೊಂಡಿದ್ದರು.
ಇದೀಗ ವಿಶ್ವ ಸುಂದರಿಯಾಗಿ ಮಿಂಚಿದ್ದಾರೆ. ಭರತನಾಟ್ಯ ಕಲಾವಿದೆಯೂ ಆಗಿರುವ ಇವರು ದುಬೈ, ಮಾಲ್ಡೀವ್ಸ್, ಭೂತಾನ್ ಮುಂತಾದ ದೇಶಗಳಲ್ಲಿ ಪ್ರದರ್ಶನ ನೀಡಿದ್ದಾರೆ. ಜೂ.6 ರಿಂದ 10 ವರೆಗೆ ಆಯೋಜಿದ್ದ ಈ ಸ್ಪರ್ಧೆಯಲ್ಲಿ ಭಾರತ ಸೇರಿ ಒಟ್ಟು 10 ದೇಶಗಳ ಸುಂದರಿಯರು ಪೈಪೋಟಿಯಲ್ಲಿದ್ದರು. ಎಲ್ಲರನ್ನೂ ಈ ನಮ್ಮ ಕನ್ನಡತಿ ಹಿಂದಿಕ್ಕಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA