ಕಾಂತಾರ ಚಾಪ್ಟರ್ 1 ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ಸಿನಿಮಾ ಸೆಟ್ ನಲ್ಲಿದ್ದ ಜೂನಿಯರ್ ಆರ್ಟಿಸ್ಟ್ ನದಿಯಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ಮೃತಪಟ್ಟವರಾಗಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ಈ ಘಟನೆ ನಡೆದಿದೆ. ಇದರಿಂದ ಸಿನಿಮಾ ತಂಡಕ್ಕೆ ಶೂಟಿಂಗ್ ನಡೆಸಲು ಹಿನ್ನಡೆಯಾಗಿದೆ.
ಶೂಟಿಂಗ್ ಮುಗಿಸಿದ ಬಳಿಕ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಕಪಿಲ್ ಅವರು ತಮ್ಮ ತಂಡದವರ ಜೊತೆ ಈಜಲು ತೆರಳಿದ್ದರು. ನೀರಿನ ಆಳ ತಿಳಿಯದೇ ಅವರು ನದಿಗೆ ಇಳಿದಿದ್ದು, ಈ ವೇಳೆ ಅವರು ಮುಳುಗಿ ಸಾವಿಗೀಡಾಗಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW