ಹಾಸನ: ಕಾಂತಾರ ಚಾಪ್ಟರ್ –1 ಕನ್ನಡ ಸಿನಿಮಾದ ಚಿತ್ರೀಕರಣದ ವೇಳೆ ಸಕಲೇಶಪುರ ಅರಣ್ಯದಲ್ಲಿ ಅಕ್ರಮವಾಗಿ ಶೂಟಿಂಗ್ ಸೆಟ್ ವಸ್ತುಗಳನ್ನು ಸುರಿದಿದ್ದಕ್ಕಾಗಿ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಗೆ ಅರಣ್ಯ ಇಲಾಖೆ ಅಧಿಕಾರಿಗಳು ರೂ. 50,000 ದಂಡ ವಿಧಿಸಿದ್ದಾರೆ.
ರಿಷಭ್ ಶೆಟ್ಟಿ ನಿರ್ದೇಶನದ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಸ್ಫೋಟಿಸಿ, ಮರಗಳನ್ನು ಕಡಿದಿರುವ ಆರೋಪ ಕೂಡಾ ಚಿತ್ರತಂಡದ ಮೇಲಿದೆ. ಸಕಲೇಶಪುರ ಅರಣ್ಯದ ಸರ್ವೇ ಸಂಖ್ಯೆ 131 ರ ಡೀಮ್ಡ್ ಫಾರೆಸ್ಟ್ ನಲ್ಲಿ ಚಿತ್ರೀಕರಣ ನಡೆಯುತ್ತಿದೆ.
ಚಿತ್ರ ತಂಡ ಷರತ್ತು ಪಡೆಯುವ ಮುನ್ನ ಅರಣ್ಯದ ಒಳಗಡೆ ಸಾಮಾಗ್ರಿಗಳನ್ನು ಸುರಿದಿದ್ದರು. ಇದು ಅತಿಕ್ರಮಣಕ್ಕೆ ಸಮಾನವಾಗಿದ್ದು, ಕರ್ನಾಟಕ ಅರಣ್ಯ ಕಾಯ್ದೆಯಡಿ ಅವರಿಗೆ 50,000 ರೂ. ದಂಡ ವಿಧಿಸಲಾಗಿದೆ. ಕೆಲವು ದಿನಗಳ ನಂತರ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದೆ ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಜನವರಿ 1 ರಂದು ಅನುಮತಿಗಾಗಿ ಯೂನಿಟ್ ಅರ್ಜಿ ಸಲ್ಲಿಸಿತು. ಆದರೆ ಇಲಾಖೆಯನ್ನು ಸಂಪರ್ಕಿಸುವ ಮೊದಲೇ ಅವರು ಕಾಡಿನೊಳಗೆ ವಸ್ತುಗಳನ್ನು ಸುರಿದಿದ್ದರು. ಜನವರಿ 3 ರಂದು ಸ್ಥಳವನ್ನು ಪರಿಶೀಲಿಸಲಾಯಿತು. ಜನವರಿ 4 ರಂದು ಎಫ್ ಐಆರ್ ದಾಖಲಿಸಲಾಯಿತು. ಈ ಕುರಿತು ವಿವರವಾದ ತನಿಖೆ ನಡೆಸಲಾಗುತ್ತಿದೆ ಮತ್ತು ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು, ಬಳಿಕ ಚಿತ್ರೀಕರಣ ಕುರಿತು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx